alex Certify
ಕನ್ನಡ ದುನಿಯಾ       Mobile App
       

Kannada Duniya

ಪಂಜಾಬ್ ನಲ್ಲಿಂದು ದಿಗ್ಗಜರ ಪ್ರಚಾರ

2017_1image_09_21_072757935odi-ll

ಫೆಬ್ರವರಿ 4ರಂದು ಪಂಜಾಬ್ ವಿಧಾನಸಭಾಗೆ ಮತದಾನ ನಡೆಯಲಿದೆ. ಮತದಾರರನ್ನು ಒಲಿಸಿಕೊಳ್ಳಲು ಎಲ್ಲ ಪಕ್ಷಗಳು ಇನ್ನಿಲ್ಲದ ಪ್ರಯತ್ನ ಮಾಡ್ತಾ ಇವೆ. ಶುಕ್ರವಾರ ಮೂರು ಪಕ್ಷಗಳ ಪ್ರಮುಖರು ಪಂಜಾಬ್ ನಲ್ಲಿ ಮತಪ್ರಚಾರ ನಡೆಸಲಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ಮೂರು ದಿನಗಳ ಕಾಲ ಪಂಜಾಬ್ ನಲ್ಲಿ ಪ್ರಚಾರ ನಡೆಸಲಿದ್ದಾರೆ. ಇಂದು ಅಮೃತಸರದ ಮಜಿಥಿಯಲ್ಲಿ ರ್ಯಾಲಿ ನಡೆಸಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಇಂದು ಪಂಜಾಬ್ ನಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಜಲಂಧರ್ ನಲ್ಲಿ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಆಮ್ ಆದ್ಮಿ ಪಕ್ಷದಿಂದ ಅರವಿಂದ್ ಕೇಜ್ರಿವಾಲ್ ಮೈದಾನಕ್ಕಿಳಿಯಲಿದ್ದಾರೆ. ಪಟಿಯಾಲಾದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಪಂಜಾಬ್ ವಿಧಾನಸಭೆ ಚುನಾವಣೆ ಘೋಷಣೆಯಾದ ನಂತ್ರ ಇದೇ ಮೊದಲ ಬಾರಿ ಒಂದೇ ದಿನ ಮೋದಿ, ರಾಹುಲ್ ಹಾಗೂ ಕೇಜ್ರಿವಾಲ್ ಪ್ರಚಾರ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಒದಗಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...