alex Certify
ಕನ್ನಡ ದುನಿಯಾ       Mobile App
       

Kannada Duniya

ಆಯುರ್ವೇದ ಸಂಶೋಧನಾ ಸಂಸ್ಥೆ ಉದ್ಘಾಟಿಸಿದ ಮೋದಿ

modi_ramdev_760_copy_1493794446_749x421

ಕೇದಾರನಾಥನ ದರ್ಶನ ಪಡೆದ ನಂತ್ರ ಹರಿದ್ವಾರಕ್ಕೆ ತೆರಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪತಂಜಲಿ ಸಂಶೋಧನಾ ಸಂಸ್ಥೆಯನ್ನು ಉದ್ಘಾಟನೆ ಮಾಡಿದ್ದಾರೆ. ಪತಂಜಲಿ ಆಯುರ್ವೇದ ಸಂಶೋಧನಾ ಸಂಸ್ಥೆ ತಲುಪಿದ ಮೋದಿಯನ್ನು ಯೋಗಗುರು ಬಾಬಾ ರಾಮ್ದೇವ್ ಹಾಗೂ ಆಚಾರ್ಯ ಬಾಲಕೃಷ್ಣ ಅದ್ಧೂರಿಯಾಗಿ ಸ್ವಾಗತಿಸಿದ್ರು.

ಆಯುರ್ವೇದ ಸಂಶೋಧನಾ ಸಂಸ್ಥೆಯನ್ನು ಉದ್ಘಾಟನೆ ಮಾಡಿದ ನಂತ್ರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಶೋಧನಾ ಸಂಸ್ಥೆಯಲ್ಲಿರುವ ಘಟಕಗಳ ಬಗ್ಗೆ ಮಾಹಿತಿ ಪಡೆದ್ರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದ ಯೋಗ ಗುರು, ಮೋದಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆಂದ್ರು. ಮೋದಿ ದೇಶಕ್ಕೆ ಉಡುಗೊರೆ ರೂಪದಲ್ಲಿ ಸಿಕ್ಕಿದ್ದಾರೆ. ಅವರನ್ನು ರಾಷ್ಟ್ರ ಋಷಿ ರೂಪದಲ್ಲಿ ಸನ್ಮಾನಿಸಬೇಕೆಂದು ಯೋಗಗುರು ಅಭಿಪ್ರಾಯಪಟ್ಟಿದ್ದಾರೆ.

ಪತಂಜಲಿ ಆಯುರ್ವೇದ ಸಂಶೋಧನಾ ಸಂಸ್ಥೆಯಲ್ಲಿ 200ಕ್ಕೂ ಹೆಚ್ಚು ಗಿಡಮೂಲಿಕೆಗಳ ಬಗ್ಗೆ ಸಂಶೋಧನೆ ನಡೆಯಲಿದೆ. ಸಂಶೋಧನಾ ಸಂಸ್ಥೆ ಜೊತೆಗೆ ಗಿಡಮೂಲಿಕೆಗಳ ತೋಟವೊಂದನ್ನು ರಾಮ್ದೇವ್ ಸಿದ್ಧಪಡಿಸಿದ್ದಾರೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಶೋಧನಾ ಸಂಸ್ಥೆಯನ್ನು ಕಟ್ಟಲಾಗಿದ್ದು, ಇದು ದೇಶದ ಅತಿದೊಡ್ಡ ಆಯುರ್ವೇದ ಸಂಶೋಧನಾ ಸಂಸ್ಥೆಯಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...