alex Certify
ಕನ್ನಡ ದುನಿಯಾ       Mobile App
       

Kannada Duniya

‘ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವುದು ಕಡ್ಡಾಯ’

indian-flagರಾಷ್ಟ್ರಗೀತೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ಸಿನಿಮಾ ಆರಂಭಕ್ಕೂ ಮುನ್ನ ಪ್ರತಿ ಚಿತ್ರಮಂದಿರದಲ್ಲೂ ಪರದೆ ಮೇಲೆ ರಾಷ್ಟ್ರಧ್ವಜದ ಹಿನ್ನಲೆಯಲ್ಲಿ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಬೇಕು. ಹಾಗೂ ಈ ಸಂದರ್ಭದಲ್ಲಿ ಚಿತ್ರಮಂದಿರದಲ್ಲಿರುವವರೆಲ್ಲರೂ ಎದ್ದು ನಿಂತು ಗೌರವ ಸಲ್ಲಿಸಬೇಕೆಂದು ಆದೇಶಿಸಿದೆ.

ಶ್ಯಾಮ್ ನಾರಾಯಣ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ಅಮಿತಾಭ್ ರಾಯ್ ಅವರುಗಳಿದ್ದ ಪೀಠ ಈ ಆದೇಶ ನೀಡಿದ್ದು, ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ಮಾಹಿತಿ ರವಾನಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ರಾಷ್ಟ್ರಗೀತೆಯನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುವುದಕ್ಕೂ ನಿರ್ಬಂಧ ಹೇರಲಾಗಿದ್ದು, ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕವೂ ಮಾಹಿತಿ ತಲುಪಿಸಲು ಸೂಚಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...