alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸೋದು ಇನ್ನಷ್ಟು ಸುಲಭ

ರಾಷ್ಟ್ರೀಯ ಅಪರಾಧ ದಾಖಲೆ ದಳ ಹೊಸ ಮೊಬೈಲ್ ಆ್ಯಪ್ ಒಂದನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕ ಸ್ನೇಹಿ ಆ್ಯಪ್ ಇದು. ದೂರು ದಾಖಲು ಮಾಡಲು, ಸ್ಟೇಟಸ್ ಚೆಕಿಂಗ್, ಎಫ್ ಐ ಆರ್ ವಿವರ ನೋಡಲು, ಪೊಲೀಸ್ ಠಾಣೆ ಎಲ್ಲಿದೆ ಅನ್ನೊದನ್ನು ತಿಳಿದುಕೊಳ್ಳಲು ಈ ಆ್ಯಪ್ ಬಳಸಬಹುದು.

ಅಷ್ಟೇ ಅಲ್ಲ ತುರ್ತು ಕರೆ ಮಾಡಲು ಕಾಂಟಾಕ್ಟ್ ಲಿಸ್ಟ್, ಪೊಲೀಸ್ ಠಾಣೆಗಳ ದೂರವಾಣಿ ಸಂಖ್ಯೆ ಇದರಲ್ಲಿದೆ. ಯಾರಾದ್ರೂ ಅನುಮಾನಾಸ್ಪದವಾಗಿ ಕಂಡುಬಂದಲ್ಲಿ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬಹುದು.

ಈ ಮೂಲಕ ಪೊಲೀಸ್ ಇಲಾಖೆ ಕೂಡ ಮಾಹಿತಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಆ್ಯಪ್ ಮೂಲಕ ಸಾರ್ವಜನಿಕರ ಅಭಿಪ್ರಾಯಗಳನ್ನು ಕೂಡ ಸಂಗ್ರಹಿಸಿ ಪೊಲೀಸ್ ಇಲಾಖೆಯನ್ನು ಇನ್ನಷ್ಟು ಸಮರ್ಥವಾಗಿ ಕಾರ್ಯನಿರ್ವಹಿಸುವಂತೆ ಮಾಡಬಹುದು.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...