alex Certify
ಕನ್ನಡ ದುನಿಯಾ       Mobile App
       

Kannada Duniya

ಸೋನಿಯಾ, ರಾಹುಲ್ ಗೆ ತಟ್ಟಲಿದೆ ತನಿಖೆಯ ಬಿಸಿ

soniarahul-kwoh-621x414livemint

ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ. ಸೋನಿಯಾ ಹಾಗೂ ರಾಹುಲ್ ವಿರುದ್ಧ ತನಿಖೆ ನಡೆಸಲು ಆದಾಯ ತೆರಿಗೆ ಇಲಾಖೆಗೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಈ ಮೊದಲು ಪಟಿಯಾಲ ಕೋರ್ಟ್ ಕೂಡ ತನಿಖೆಗೆ ಅವಕಾಶ ನೀಡಿತ್ತು. ಅದನ್ನು ಪ್ರಶ್ನಿಸಿ ರಾಹುಲ್ ಹಾಗೂ ಸೋನಿಯಾ ಹೈಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾಶನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸ್ತಾ ಇದ್ದ ಕಂಪನಿಯ ಹಣವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ ಅಂತಾ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಖಾತೆಯ ಮಾಹಿತಿ ಮತ್ತು ತೆರಿಗೆ ಪಾವತಿಯ ವಿವರ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.

ಆದ್ರೆ ಆ ಅರ್ಜಿಯನ್ನು ಪಟಿಯಾಲ ಕೋರ್ಟ್ ವಜಾ ಮಾಡಿತ್ತು. ಕಳೆದ ಆಗಸ್ಟ್ ನಲ್ಲಿ ಸೋನಿಯಾ ಹಾಗೂ ರಾಹುಲ್ ಗೆ ನೋಟಿಸ್ ಜಾರಿ ಮಾಡಿತ್ತು. ಹಣಕಾಸು ಸಚಿವಾಲಯ ಹಾಗೂ ಆದಾಯ ತೆರಿಗೆ ಇಲಾಖೆಗಳು ದಾಖಲೆ ಸಲ್ಲಿಸುವಂತೆ ಸೂಚಿಸಿತ್ತು. ಕೋರ್ಟ್ ಗಡುವಿನಂತೆ ಸುಬ್ರಮಣಿಯನ್ ಸ್ವಾಮಿ ಫೆಬ್ರವರಿ 10ರಂದು ಸಾಕ್ಷಿದಾರರ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದೀಗ ಕಾಂಗ್ರೆಸ್ ವರಿಷ್ಠರಿಗೆ ತನಿಖೆಯ ಬಿಸಿ ತಟ್ಟಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...