alex Certify
ಕನ್ನಡ ದುನಿಯಾ       Mobile App
       

Kannada Duniya

‘ಪ್ಲಾಸ್ಟಿಕ್ ಬ್ಯಾನ್’ ಪಟ್ಟಿಗೆ ಸೇರ್ಪಡೆಯಾಗಲಿದೆ ಮತ್ತೊಂದು ರಾಜ್ಯ

ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮಂಗಳವಾರದಂದು ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯವನ್ನು ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ಈ ಕಾನೂನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ. ಜನರು ಏನೇ ಖರೀದಿ ಮಾಡಿದರು ಪ್ಲಾಸ್ಟಿಕ್ ಬ್ಯಾಗನ್ನು ಉಪಯೋಗಿಸಬಾರದೆಂದು ಮನವಿ ಮಾಡಿದ್ದಾರೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎನ್ನುವ ಸಂದೇಶವನ್ನು ಅವರು ಈ ಮುಖಾಂತರ ಜನತೆಗೆ ತಿಳಿ ಹೇಳಿದ್ದಾರೆ.

ಮೊದಲಿಗೆ ಪುರಿ, ಕಟಕ್, ಬರ್ಹಂಪೂರ್, ಸಂಬಾಲ್ಪುರ್, ರೂರ್ಕೆಲಾಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡಲಾಗುವುದು ನಂತರ ರಾಜ್ಯಕ್ಕೆ ಇದನ್ನು ವಿಸ್ತರಿಸಲಾಗುವುದು ಎಂದು ಅವರು ಪರಿಸರ ಜಾಗರೂಕತಾ ಸಭೆಯಲ್ಲಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...