alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಕ್ಸರ್ ಸಿಧು ಹೊಸ ಪಕ್ಷ ಸ್ಥಾಪನೆ

sidh kl

ಚಂಡೀಗಢ: ಮಾಜಿ ಸಂಸದ ನವಜೋತ್ ಸಿಂಗ್ ಸಿಧು, ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯಸಭೆ ಸದಸ್ಯತ್ವ ಮತ್ತು ಬಿ.ಜೆ.ಪಿ.ಗೆ ರಾಜೀನಾಮೆ ನೀಡಿದ್ದ ಅವರು, ಬೇರೆ ಪಕ್ಷ ಸೇರಲಿದ್ದಾರೆ ಎನ್ನಲಾಗಿತ್ತು.

‘ಆವಾಜ್ ಎ ಪಂಜಾಬ್’ ಹೆಸರಿನ ಪಕ್ಷವನ್ನು ಅವರು ಸ್ಥಾಪನೆ ಮಾಡುವ ಮೂಲಕ, ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಸಿಧು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಆಮ್ ಆದ್ಮಿ ಸೇರಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೂ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಅವರು ಘೋಷಿಸುವ ಮೂಲಕ ಪಂಜಾಬ್ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.

ಸೆಪ್ಟಂಬರ್ 9 ರಂದು ನವಜೋತ್ ಸಿಂಗ್ ಸಿಧು ಅಪಾರ ಸಂಖ್ಯೆಯ ಜನರ ಸಮ್ಮುಖದಲ್ಲಿ ‘ಆವಾಜ್ ಎ ಪಂಜಾಬ್’ ಪಕ್ಷ ಸ್ಥಾಪನೆ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಸಿಧು ಪತ್ನಿ ನವಜೋತ್ ಕೌರ್ ಹೊಸ ಪಕ್ಷ ಸ್ಥಾಪನೆ ಬಗ್ಗೆ ಸುಳಿವು ನೀಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...