alex Certify
ಕನ್ನಡ ದುನಿಯಾ       Mobile App
       

Kannada Duniya

ನವಜೋತ್ ಸಿಂಗ್ ಸಿಧು ಯು ಟರ್ನ್

navjot 21

‘ಆವಾಜ್ ಇ ಪಂಜಾಬ್’ ಪಕ್ಷ ಸ್ಥಾಪಿಸುವ ಮೂಲಕ, ಪಂಜಾಬ್ ರಾಜಕೀಯ ಲೆಕ್ಕಾಚಾರಗಳನ್ನೆಲ್ಲಾ ತಲೆಕೆಳಕಾಗುವಂತೆ ಮಾಡಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ಯು ಟರ್ನ್ ತೆಗೆದುಕೊಂಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಮುಂದಿನ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸಿಧು ನೇತೃತ್ವದ ‘ಆವಾಜ್ ಇ ಪಂಜಾಬ್’ ಸ್ಪರ್ಧಿಸಬೇಕಿತ್ತು. ಆದರೆ, ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸಿದರೆ, ಆಡಳಿತ ವಿರೋಧಿ ಮತಗಳನ್ನು ವಿಭಜಿಸಿದಂತಾಗುತ್ತದೆ ಎಂಬ ಕಾರಣ ನೀಡಿರುವ ಸಿಧು, ಚುನಾವಣೆಯಿಂದ ದೂರ ಉಳಿಯಲು ತೀರ್ಮಾನ ಕೈಗೊಂಡಿದ್ದಾರೆ.

ಆವಾಜ್ ಇ ಪಂಜಾಬ್ ಸದ್ಯಕ್ಕೆ ರಾಜಕೀಯೇತರ ವೇದಿಕೆಯಾಗಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದೆ. ದುರಾಡಳಿತವನ್ನು ಕೊನೆಗೊಳಿಸಲು ಹೋರಾಟ ನಡೆಸಲಿದೆ ಎಂದು ಸಿಧು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...