alex Certify
ಕನ್ನಡ ದುನಿಯಾ       Mobile App
       

Kannada Duniya

2019 ರ ಲೋಕಸಭಾ ಚುನಾವಣೆ ಕುರಿತು ಪ್ರಧಾನಿ ಮೋದಿ ಹೇಳಿದ್ದೇನು?

2019ರ ಲೋಕಸಭಾ ಚುನಾವಣೆಯಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನ ಮುರಿದು ಹೊಸ ದಾಖಲೆಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರೋದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

2014ರ ಚುನಾವಣೆಯಲ್ಲಿ ಪಡೆದ ಸ್ಥಾನಗಳಿಗಿಂತಲೂ ಹೆಚ್ಚಿನ ಸ್ಥಾನಗಳನ್ನು ಪಡೆದು ಎದುರಾಳಿಗಳನ್ನ ಧೂಳೀಪಟ ಮಾಡುವ ಆತ್ಮವಿಶ್ವಾಸ ನಮಗಿದೆ ಅಂತ ಮೋದಿ ದೆಹಲಿಯಲ್ಲಿ ತಿಳಿಸಿದ್ದಾರೆ. ಕಳೆದ ಬಾರಿ ಎನ್ಡಿಎ ಮೈತ್ರಿಕೂಟ ಮಾಡಿದ ಸಾಧನೆಗಿಂತ ಈ ಬಾರಿ ಹೆಚ್ಚು ಸ್ಥಾನಗಳನ್ನ ಗೆಲ್ಲಲಿದ್ದೀವಿ ಅಂತ ನಮೋ ಹೇಳಿದ್ದಾರೆ.

ಅಷ್ಟೇ ಅಲ್ಲ, ಮಹಾಮೈತ್ರಿ ಬಗ್ಗೆಯೂ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾ ಮೈತ್ರಿ ಅನ್ನೋದು ಎಂದಿಗೂ ಸಫಲತೆಯನ್ನೇ ಕಾಣದಂತಾ ಮಹಾ ಯೋಜನೆ. ಸಿದ್ಧಾಂತ ರಹಿತವಾದಂತ ಮಹಾ ಮೈತ್ರಿ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಪ್ಲಾಫ್ ಷೋ ನೀಡಲಿದೆ ಅಂತ ಮೋದಿ ಅಣಕವಾಡಿದ್ದಾರೆ.

ಇದೇ ಸಂದರ್ಭದಲ್ಲಿ ಮೋದಿ ಕಾಂಗ್ರೆಸ್ ಬಗ್ಗೆಯೂ ಟೀಕಾಪ್ರಹಾರ ನಡೆಸಿದ್ದಾರೆ. ರಾಷ್ಟ್ರದ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲದ ಕಾಂಗ್ರೆಸ್ ರಫಾಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡ್ತಿದೆ. ಮೇಕ್ ಇನ್ ಇಂಡಿಯಾ ಯೋಜನೆಗಳು ವಿಫಲವಾಗಿದೆ ಅಂತಿದೆ. ಆದ್ರೆ 2017ರ ಸೆಪ್ಟೆಂಬರ್ನಿಂದ ಏಪ್ರಿಲ್ 2018 ರ ಅವಧಿಯಲ್ಲಿ 70 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ ಅಂತ ಮೋದಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...