alex Certify
ಕನ್ನಡ ದುನಿಯಾ       Mobile App
       

Kannada Duniya

ಭರ್ಜರಿ ಕೊಡುಗೆ! ಶೇ. 200 ರಷ್ಟು ಹೆಚ್ಚಾಯ್ತು ವೇತನ

ನವದೆಹಲಿ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ವೇತನವನ್ನು ಶೇ. 200 ರಷ್ಟು ಏರಿಕೆ ಮಾಡುವ ಮೂಲಕ ಭರ್ಜರಿ ಕೊಡುಗೆ ನೀಡಿದೆ.

ಸುಪ್ರೀಂ ಕೋರ್ಟ್ ಹಾಗೂ 24 ಹೈಕೋರ್ಟ್ ನ್ಯಾಯಮೂರ್ತಿಗಳು, ನಿವೃತ್ತ ನ್ಯಾಯಮೂರ್ತಿಗಳಿಗೆ ಪರಿಷ್ಕೃತ ವೇತನದ ಲಾಭ ಸಿಗಲಿದೆ. ಜನವರಿ 27 ರಂದು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, 2016 ರ ಜನವರಿ 1 ರಿಂದಲೇ ಪೂರ್ವಾನ್ವಯವಾಗುವಂತೆ ಪರಿಷ್ಕೃತ ವೇತನ ಜಾರಿಗೆ ಬರುತ್ತದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವೇತನ 1 ಲಕ್ಷ ರೂ. ನಿಂದ 2.80 ಲಕ್ಷ ರೂ.ಗೆ ಏರಿಕೆಯಾಗಲಿದೆ. ಇದರೊಂದಿಗೆ ಇತರೆ ವೆಚ್ಚ ಹಾಗೂ ಭತ್ಯೆಗಳು ಕೂಡ ಏರಿಕೆಯಾಗಿವೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವೇತನ 90,000 ರೂ.ನಿಂದ 2.50 ಲಕ್ಷ ರೂ. ಗೆ ಹೆಚ್ಚಳವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...