alex Certify
ಕನ್ನಡ ದುನಿಯಾ       Mobile App
       

Kannada Duniya

ಮಗನ ನಿರ್ಲಕ್ಷಕ್ಕೆ ಬೇಸತ್ತು ಆತ್ಮಹತ್ಯೆಗೆ ನಿರ್ಧರಿಸಿದ ವೃದ್ಧ ದಂಪತಿ

ಅನಾರೋಗ್ಯದಿಂದ ಬಳಲುತ್ತಿದ್ದರೂ ಚಿಕಿತ್ಸೆ ಕೊಡಿಸದೆ ತಮ್ಮ ಪುತ್ರ ನಿರ್ಲಕ್ಷ ಮಾಡುತ್ತಿರುವುದರಿಂದ ಬೇಸತ್ತ ವೃದ್ಧ ದಂಪತಿಗಳು, ತಮ್ಮ ಜೀವವನ್ನು ಕೊನೆಗಾಣಿಸಿಕೊಳ್ಳಲು ನಿರ್ಧರಿಸಿದ್ದು, ಇದಕ್ಕಾಗಿ ಅನುಮತಿ ಕೋರಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದಾರೆ.

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಸರ್ಪಾವರಂ ಗ್ರಾಮದ 62 ವರ್ಷದ ಅಪ್ಪಾರಾವ್ ಹಾಗೂ ಅವರ ಪತ್ನಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದು, ಕಾಕಿನಾಡ ಜಿಲ್ಲಾ ರಕ್ಷಣಾಧಿಕಾರಿ ವಿಶಾಲ್ ಗನ್ನಿ ಅವರಿಗೆ ಈ ಕುರಿತು ಮನವಿ ಪತ್ರ ನೀಡಿದ್ದಾರೆ.

ಈ ವೃದ್ಧ ದಂಪತಿಗಳಿಗೆ ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನಿದ್ದು, ದಶಕಗಳ ಹಿಂದೆಯೇ ಪುತ್ರಿಯರಿಗೆ ವಿವಾಹ ಮಾಡಿಕೊಡಲಾಗಿದೆ. ಪುತ್ರ ರವಿ, ದಂಪತಿಗಳ ಕೋಟ್ಯಾಂತರ ರೂ. ಆಸ್ತಿ ಪತ್ರಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದು, ಕಿಡ್ನಿ ಕಾಯಿಲೆಯಿಂದ ಬಳಲುತ್ತಿರುವ ತನ್ನ ತಂದೆಯ ಚಿಕಿತ್ಸೆಗೆ ಬಿಡಿಗಾಸನ್ನೂ ನೀಡುತ್ತಿಲ್ಲವೆನ್ನಲಾಗಿದೆ. ಇದರಿಂದ ನೊಂದ ದಂಪತಿ, ಜಿಲ್ಲಾ ರಕ್ಷಣಾಧಿಕಾರಿಗಳ ಮೊರೆ ಹೋಗಿದ್ದು, ದಂಪತಿಗಳಿಗೆ ನೆರವು ನೀಡುವುದಾಗಿ ಜಿಲ್ಲಾ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...