alex Certify
ಕನ್ನಡ ದುನಿಯಾ       Mobile App
       

Kannada Duniya

ಧ್ವಜಾರೋಹಣ ನೆರವೇರಿಸಿ ಮೋದಿ ಹೇಳಿದ್ದೀಗೆ….

pm-modi-dhf

ನವದೆಹಲಿ: ಭಾರತದ 71 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕರು ತಮ್ಮ ಜೀವವನ್ನು ಮುಡಿಪಾಗಿಟ್ಟಿದ್ದರು. ಅವರನ್ನು ನಾವು ಸ್ಮರಿಸಬೇಕಿದೆ ಎಂದು ಹೇಳಿದ್ದಾರೆ.

ಎಲ್ಲರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಹೊಸ ಚಳವಳಿ ನಡೆಯಬೇಕಿದೆ. ಎಲ್ಲರ ಒಂದುಗೂಡುವಿಕೆ ಮತ್ತು ಸಹಭಾಗಿತ್ವದಿಂದ ನವಭಾರತ ನಿರ್ಮಾಣ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಕ್ವಿಟ್ ಇಂಡಿಯಾ ಚಳವಳಿಯ 75 ನೇ ವರ್ಷಾಚರಣೆಯಲ್ಲಿದ್ದೇವೆ. ಭಾರತಕ್ಕೆ ಸ್ವಾತಂತ್ರ್ಯವನ್ನು ತಂದುಕೊಡುವಲ್ಲಿ ಕ್ವಿಟ್ ಇಂಡಿಯಾ ಚಳವಳಿ ಪ್ರಮುಖವಾದುದು. ಮನಸ್ಸಿದ್ದರೆ ಮಾರ್ಗವೆಂದು ಶ್ರೀಕೃಷ್ಣ ಹೇಳಿದ್ದಾನೆ. ನಾವೆಲ್ಲರೂ ಹೊಸ ಕನಸು, ಆಶಯಗಳೊಂದಿಗೆ ಭವ್ಯ ಭಾರತವನ್ನು ನಿರ್ಮಿಸೋಣ ಎಂದಿದ್ದಾರೆ.

ಗೋರಖ್ ಪುರದಲ್ಲಿ ನಡೆದ ದುರಂತ ದೇಶವನ್ನು ನಡುಗಿಸಿದೆ. ಮಕ್ಕಳನ್ನು ಕಳೆದುಕೊಂಡ ಕುಟುಂಬದವರೊಂದಿಗೆ ದೇಶವೇ ಇದೆ. ದೇಶ ಪ್ರಗತಿಯತ್ತ ಹೆಜ್ಜೆ ಹಾಕುತ್ತಿದೆ. ವಿಶ್ವವೇ ಭಾರತವನ್ನು ಬೆರಗಿನಿಂದ ನೋಡುತ್ತಿದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಸಮಸ್ಯೆ ಮುಳ್ಳಾಗಿ ಕಾಡುತ್ತಿದೆ. ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಬಂದೂಕುಗಳಿಂದಲ್ಲ. ಆಲಿಂಗನದಿಂದ ಪರಿಹಾರ ಕಂಡುಕೊಳ್ಳುವುದು ನಮ್ಮ ಆದ್ಯತೆಯಾಗಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...