alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದ ವಿಜಯಕ್ಕಾಗಿ ಕಾಂಗ್ರೆಸ್ ಹೊಸ ರಣನೀತಿ

ಗುಜರಾತ್ ಚುನಾವಣೆಯಲ್ಲಿ ಯಶ ಕಂಡಿರುವ ಕಾಂಗ್ರೆಸ್ ಕರ್ನಾಟಕ ವಿಧಾನಸಭೆ ಮೇಲೆ ಕಣ್ಣಿಟ್ಟಿದೆ. ಕರ್ನಾಟಕ ವಿಧಾನ ಸಭೆಯನ್ನು ಮತ್ತೆ ತನ್ನ ಕಪಿಮುಷ್ಠಿಗೆ ತೆಗೆದುಕೊಳ್ಳಲು ರಣತಂತ್ರ ರೂಪಿಸುತ್ತಿದೆ. ಗುಜರಾತ್ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ರೂಪಿಸಿದ್ದ ರಣತಂತ್ರದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡ್ತಿದೆ.

ಈಗಾಗಲೇ ಕಾಂಗ್ರೆಸ್ ತನ್ನ ಕೆಲಸದಲ್ಲಿ ನಿರತವಾಗಿದೆ. ರಾಜ್ಯದ ಪ್ರಚಾರದ ಹೊಣೆ ಸಂಪೂರ್ಣ ಹೈಕಮಾಂಡ್ ಕೈನಲ್ಲಿರಲಿದೆ. ಮಾಧ್ಯಮಗಳ ಮುಂದೆ ಯಾರು ಮಾತನಾಡಬೇಕೆನ್ನುವ ಬಗ್ಗೆಯೂ ಈಗಾಗಲೇ ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸಿದೆ. ಕಾಂಗ್ರೆಸ್ ಆ ನಾಯಕರಿಗೆ ವಿಶೇಷ ತರಬೇತಿ ಕೂಡ ನೀಡಲಿದೆ ಎಂದು ಮೂಲಗಳು ಹೇಳಿವೆ.

ಕಾಂಗ್ರೆಸ್ ಅಸೋಸಿಯೇಟ್ ಸಂಘಟನೆ, ಸಾಮಾಜಿಕ ಜಾಲತಾಣದಲ್ಲಿ ಹೊಸಬರನ್ನು ಸೇರಿಸುವ ನಿರ್ಧಾರ ಕೈಗೊಂಡಿದೆ. ಹಾಗೆ ಕಾಂಗ್ರೆಸ್ ಅಭ್ಯರ್ಥಿಗಳು ಕಾಂಗ್ರೆಸ್ ಸಿದ್ಧಾಂತವನ್ನು ಅರ್ಥ ಮಾಡಿಕೊಂಡು ನಡೆಯಬೇಕಾಗುತ್ತದೆ. ರಾಜಕೀಯ ನಿಲುವು, ಪಕ್ಷದಲ್ಲಿನ ಬದಲಾವಣೆಗಳ ಬಗ್ಗೆ ಅವರು ತಿಳಿದಿರಬೇಕಾಗುತ್ತದೆ.

ರಾಜ್ಯದ ನಂತ್ರ ಕಾಂಗ್ರೆಸ್ ಜಿಲ್ಲಾ ಮಟ್ಟದಲ್ಲಿ ಅಭಿಯಾನ ತಂಡವನ್ನು ರಚಿಸಲಿದೆ. ಒಟ್ಟಿನಲ್ಲಿ ಈ ಬಾರಿಯೂ ರಾಜ್ಯದಲ್ಲಿ ಗೆಲುವು ಸಾಧಿಸುವುದು ಕಾಂಗ್ರೆಸ್ ಮೂಲ ಗುರಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...