alex Certify
ಕನ್ನಡ ದುನಿಯಾ       Mobile App
       

Kannada Duniya

ನಿರ್ಭಯಾ ಪ್ರಕರಣದ ಅಪರಾಧಿ ಆತ್ಮಹತ್ಯೆ ಯತ್ನ

nirbhaya vinay

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಅಪರಾಧಿಯೊಬ್ಬ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆತನಿಗೆ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾನೆ.

ವಿನಯ್ ಶರ್ಮ ಆತ್ಮಹತ್ಯೆಗೆ ಯತ್ನಿಸಿದ ಅಪರಾಧಿ. ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿ ಇದ್ದ ವಿನಯ್ ಶರ್ಮ ಮಾತ್ರೆ ಸೇವಿಸಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಜೈಲಿನ ಆಸ್ಪತ್ರೆಗೆ ಸೇರಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ದೀನದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಸೇರಿಸಲಾಗಿದೆ. ವಿನಯ್ ಶರ್ಮ ಚಿಂತಾಜನಕ ಸ್ಥಿತಿಯಲ್ಲಿದ್ದಾನೆ. 2012ರ ಡಿಸೆಂಬರ್ ನಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ವಿನಯ್ ಶರ್ಮ ಭಾಗಿಯಾಗಿದ್ದ.

ಚಲಿಸುತ್ತಿದ್ದ ಬಸ್ ನಲ್ಲಿ ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಲಾಗಿತ್ತು. ದೇಶಾದ್ಯಂತ ಸಂಚಲನ ಮೂಡಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ವಿನಯ್ ಶರ್ಮ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...