alex Certify
ಕನ್ನಡ ದುನಿಯಾ       Mobile App
       

Kannada Duniya

ನಿರ್ಭಯಾ ಪ್ರಕರಣ: ಗಲ್ಲು ಶಿಕ್ಷೆ ಎತ್ತಿ ಹಿಡಿದ ಸುಪ್ರೀಂ

ದೆಹಲಿಯಲ್ಲಿ 2012 ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರಣದಂಡನೆ ತೀರ್ಪನ್ನು ಎತ್ತಿ ಹಿಡಿದಿದೆ. ನಾಲ್ವರ ಪೈಕಿ ಮೂವರು ಆರೋಪಿಗಳು ತೀರ್ಪನ್ನು ಮರುಪರಿಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾ ಮಾಡಿದ ಸರ್ವೋಚ್ಛ ನ್ಯಾಯಾಲಯ ಮರಣದಂಡನೆ ತೀರ್ಪನ್ನು ಖಾಯಂಗೊಳಿಸಿದೆ.

ಸುಪ್ರೀಂ ಕೋರ್ಟ್ ನ ಈ ತೀರ್ಪಿನ ನಂತ್ರ ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ಖಾಯಂ ಆಗಿದೆ. ಅಪರಾಧಿಗಳಾದ ಮುಖೇಶ್, ವಿನಯ್, ಪವನ್ ಹಾಗೂ ಅಕ್ಷಯ್ ಮುಂದೆ ರಾಷ್ಟ್ರಪತಿಗಳ ಆಯ್ಕೆಯೊಂದೇ ಇದೆ. ರಾಷ್ಟ್ರಪತಿಗಳಿಗೆ ಕ್ಷಮೆ ಕೋರಿ ಆರೋಪಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಡಿಸೆಂಬರ್ 16, 2012 ರಂದು ಇಡೀ ದೇಶವೇ ಬೆಚ್ಚಿ ಬೀಳಿಸುವ ಘಟನೆ ನಡೆದಿತ್ತು. ಹಿಂದಿನ ವರ್ಷ ಅಪರಾಧಿಗಳು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆಗ ಸುಪ್ರೀಂ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿತ್ತು. ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಇದನ್ನು ಮರು ಪರಿಶೀಲನೆ ನಡೆಸುವಂತೆ ಈ ವರ್ಷ  ಮುಖೇಶ್, ಪವನ್, ವಿನಯ್  ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕೂಡ ಈಗ ವಜಾ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...