alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆ

nitiss

ಪಾಟ್ನಾ: ಬಿಹಾರ ರಾಜಕಾರಣದಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆಗೆ ನಿತೀಶ್ ಸೂಚಿಸಿದ್ದರು.

ಬಿಹಾರದಲ್ಲಿ ಜೆ.ಡಿ.ಯು. ಹಾಗೂ ಆರ್.ಜೆ.ಡಿ ಮೈತ್ರಿಕೂಟ ಅಧಿಕಾರದಲ್ಲಿದೆ. ತೇಜಸ್ವಿ ರಾಜೀನಾಮೆ ನೀಡಬೇಕಾದರೆ, ಸರ್ಕಾರಕ್ಕೆ ನಾವು ನೀಡಿರುವ ಬೆಂಬಲವನ್ನು ಪರಿಶೀಲಿಸಬೇಕಾಗುತ್ತದೆ ಎಂದು ಆರ್.ಜೆ.ಡಿ ನಾಯಕ ಲಾಲೂ ಪ್ರಸಾದ್ ಯಾದವ್ ಹೇಳಿದ್ದರು.

ತೇಜಸ್ವಿ ರಾಜೀನಾಮೆ ನೀಡಲೇಬೇಕೆಂದು ನಿತೀಶ್ ಕುಮಾರ ಪಟ್ಟು ಹಿಡಿದಾಗ, ಲಾಲೂ ನಾವು ಅನ್ಯೋನ್ಯವಾಗಿದ್ದೇವೆ. ಮಾಧ್ಯಮಗಳೇ ನಮ್ಮ ಮೈತ್ರಿಯನ್ನು ಮುರಿಯಲು ಯತ್ನಿಸುತ್ತಿವೆ ಎಂದಿದ್ದರು. ಪುತ್ರ ರಾಜೀನಾಮೆ ನೀಡಬಾರದು ಎಂಬುದು ಅವರ ನಿಲುವಾಗಿತ್ತು.

ಇದಕ್ಕೆ ಒಪ್ಪದ ನಿತೀಶ್ ಅವರೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿತೀಶ್ ಕುಮಾರ್ ಶಾಸಕಾಂಗ ಸಭೆ ನಡೆಸಿ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ.

ಸಭೆಯಿಂದ ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ನಿತೀಶ್ ಕುಮಾರ್ ಗೆ ಬಿ.ಜೆ.ಪಿ. ಬೆಂಬಲ ನೀಡಲಿದ್ದು, ಈ ಕುರಿತಾಗಿ ಚರ್ಚಿಸಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿ.ಜೆ.ಪಿ. ಸಂಸದೀಯ ಮಂಡಳಿ ಸಭೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...