alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆಯ ಕಾರಣಕ್ಕೆ ಬರುತ್ತಿದ್ದಾರೆ ಬೇಡದ ಅತಿಥಿಗಳು…!

ದೆಹಲಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಜನರ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಮಳೆಯಿಂದ ಮನೆಗಳಿಗೆ ಹೊಸ ಅತಿಥಿಗಳ ಆಗಮನ ಸಾಮಾನ್ಯವಾಗಿದೆ.

ದೆಹಲಿಯಲ್ಲಿ ನಿನ್ನೆ ಲಾಲ್ ಕೌನ್ ಹತ್ತಿರದ ಬಡಾವಣೆಯಲ್ಲಿ 8 ಅಡಿಯ ಉದ್ದದ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ಕಾಣುತ್ತಿದ್ದಂತೆ ನಿವಾಸಿಗಳು ಸಹಾಯವಾಣಿಗೆ ಕಾಲ್ ಮಾಡಿದ್ದಾರೆ. ಎನ್.ಜಿ.ಓ. ಸಿಬ್ಬಂದಿ ಸ್ಥಳಕ್ಕೆ ಬಂದು ಹೆಬ್ಬಾವು ಹಿಡಿಯುವಲ್ಲಿ ಸಫಲರಾಗಿದ್ದಾರೆ.

ಇನ್ನೊಂದು ಪ್ರಾಂತ್ಯದಲ್ಲಿ 3 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಎನ್.ಜಿ.ಓ. ಕಾಳಿಂಗ ಸರ್ಪವನ್ನು ಹಿಡಿಯುವಲ್ಲಿ ಸಫಲವಾಗಿದ್ದು, ಅರಣ್ಯಕ್ಕೆ ಬಿಟ್ಟಿದ್ದಾರೆ.

ಕಳೆದ ವಾರವಷ್ಟೇ ದೆಹಲಿಯಲ್ಲಿ ಮೂರು ಕಾಳಿಂಗ ಸರ್ಪಗಳು ಕಾಣಿಸಿಕೊಂಡಿದ್ದವು. ಸಹಾಯವಾಣಿ ಸಿಬ್ಬಂದಿಗಳು ಅವುಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು ಎಂಬುದನ್ನು ಸ್ಮರಿಸಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...