alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದು ವಾರ ಭಕ್ತರಿಗೆ ಸಿಗಲ್ಲ ತಿರುಪತಿ ತಿಮ್ಮಪ್ಪನ ದರ್ಶನ

ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪ ದೇವಾಲಯದಲ್ಲಿ ಒಂದು ವಾರಗಳ ಕಾಲ ಭಕ್ತರಿಗೆ ದರ್ಶನ ಅವಕಾಶವನ್ನು ನಿರ್ಬಂಧಿಸಲಾಗಿದೆ.

ತಿರುಪತಿ ತಿರುಮಲದಲ್ಲಿ 12 ವರ್ಷಗಳಿಗೆ ಒಮ್ಮೆ ಅಷ್ಟಬಂಧ ಬಾಲಾಲಯ ಮಹಾಸಂಪ್ರೋಕ್ಷಣಂ ಕಾರ್ಯ ನಡೆಯುತ್ತದೆ. ಈ ಹಿನ್ನಲೆಯಲ್ಲಿ ಆ. 11 ರಿಂದ 16 ರವರೆಗೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶವಿರುವುದಿಲ್ಲ.

ಈ ವೇಳೆ ಅರ್ಚಕರನ್ನು ಹೊರತುಪಡಿಸಿ ಬೇರೆ ಯಾರೂ ದೇವಾಲಯ ಪ್ರವೇಶ ಮಾಡುವಂತಿಲ್ಲ. 16 ರ ಗುರುವಾರ ಮಧ್ಯರಾತ್ರಿಯಿಂದ ಮತ್ತೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಐದು ದಿನಗಳ ಕಾಲ ನಡೆಯಲಿರುವ ಮಹಾಪ್ರೋಕ್ಷಣಂ ಬಳಿಕ 48 ದಿನಗಳ ಕಾಲ ದೇವಾಲಯದಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...