alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೊಳಗಾದ ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಡಾಕ್ಟರ್ ಗಳೇ ಚಕ್ಕರ್!

ಗಾಜಿಯಾಬಾದ್ ನಲ್ಲಿ 2 ದಿನಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಗೆ ಇದುವರೆಗೂ ವೈದ್ಯಕೀಯ ಪರೀಕ್ಷೆ ನಡೆಸಿಲ್ಲ. ಆರೋಪಿಗಳು ಕೂಡ ಅಪ್ರಾಪ್ತರಾಗಿದ್ದು ಅವರನ್ನು ಈಗಾಗ್ಲೇ ಬಂಧಿಸಲಾಗಿದೆ. ಅವರಿಬ್ಬರೂ ಬಾಲಕಿಯ ನೆರೆಹೊರೆಯವರು.

ಮನೆಯ ಸಮೀಪದಲ್ಲೇ ಆಡುತ್ತಿದ್ದ ಬಾಲಕಿಯನ್ನು ಇಬ್ಬರೂ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅವಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಅಂತಾ ದೂರು ದಾಖಲಾಗಿದೆ. ಅತ್ಯಾಚಾರದ ಬಗ್ಗೆ ಯಾರ ಬಳಿಯಾದ್ರೂ ಹೇಳಿದ್ರೆ ಕೊಂದು ಬಿಡೋದಾಗಿ ಬಾಲಕಿಗೆ ಬೆದರಿಕೆ ಹಾಕಲಾಗಿದೆ ಅಂತಾನೂ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದ್ರೆ ಮನೆಗೆ ಬಂದ ಬಾಲಕಿ ನಡೆದ ಘಟನೆಯನ್ನು ಹೆತ್ತವರ ಬಳಿ ಹೇಳಿಕೊಂಡಿದ್ಲು. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದಿರೋದ್ರಿಂದ ಘಟನೆ ನಡೆದು 2 ದಿನಗಳಾದ್ರೂ ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆದಿಲ್ಲ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...