alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಶಾಕ್ ಕೊಟ್ಟ ಪೊಲೀಸರು

lkono-abyk

ಲಖ್ನೋ: ಹೆಲ್ಮೆಟ್ ಕಡ್ಡಾಯ ಆದೇಶ ಜಾರಿಯಾಗಿದ್ದರೂ, ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದ ಕಾರಣ ಪೊಲೀಸರು ಪೆಟ್ರೋಲ್ ಸಿಗದಂತೆ ಮಾಡಲು ಮುಂದಾಗಿದ್ದಾರೆ.

ಉತ್ತರ ಪ್ರದೇಶದ ಲಖ್ನೋ ಪೊಲೀಸರು ಹೆಲ್ಮೆಟ್ ಇಲ್ಲದ ವಾಹನ ಸವಾರರಿಗೆ ಪೆಟ್ರೋಲ್ ಹಾಕದಂತೆ ಬಂಕ್ ಮಾಲೀಕರಿಗೆ ಸೂಚಿಸಿದ್ದಾರೆ. ಸುರಕ್ಷತೆ ದೃಷ್ಠಿಯಿಂದ ಹೆಲ್ಮೆಟ್ ಧರಿಸುವಂತೆ ಪೊಲೀಸರು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದರು.

ಆದರೂ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದು ಮುಂದುವರೆದಿದೆ. ಈ ಹಿನ್ನಲೆಯಲ್ಲಿ ‘ನೋ ಹೆಲ್ಮೆಟ್ ನೋ ಪೆಟ್ರೋಲ್’ ಅಭಿಯಾನ ಆರಂಭಿಸಲಾಗಿದೆ.

ಪೆಟ್ರೋಲ್ ಬಂಕ್ ಮಾಲೀಕರೊಂದಿಗೆ ಸಭೆ ನಡೆಸಿರುವ ಲಖ್ನೋ ಪೊಲೀಸರು, ಹೆಲ್ಮೆಟ್ ಇಲ್ಲದ ವಾಹನ ಸವಾರರಿಗೆ ಪೆಟ್ರೋಲ್ ಹಾಕದಂತೆ ಸೂಚನೆ ನೀಡಿದ್ದು, ಇದಕ್ಕೆ ಬಂಕ್ ಮಾಲೀಕರು ಸಮ್ಮತಿಸಿದ್ದಾರೆ.

ಮೇ 21 ರಿಂದ ಲಖ್ನೋ ಪೆಟ್ರೋಲ್ ಬಂಕ್ ಗಳಲ್ಲಿ ‘ನೋ ಹೆಲ್ಮೆಟ್ ನೋ ಪೆಟ್ರೋಲ್’ ನಿಯಮ ಜಾರಿಯಾಗಲಿದೆ. ಮುಂದಿನ ಹಂತದಲ್ಲಿ ಹೆಲ್ಮೆಟ್ ಇಲ್ಲದೇ ಬಂಕ್ ಗೆ ಬಂದವರಿಗೆ ಬಂಕ್ ಸಿಬ್ಬಂದಿಯೇ ನೋಟಿಸ್ ನೀಡುವ ನಿಯಮವನ್ನೂ ಜಾರಿಗೆ ತರಲಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪರಾಭವಕ್ಕೆ ಕೊಹ್ಲಿ ತಪ್ಪು ನಿರ್ಧಾರ ಕಾರಣವೇ..?

    View Results

    Loading ... Loading ...