alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್ ಬೇಕಾದ್ರೆ ಇದನ್ನು ಅನುಸರಿಸಲೇಬೇಕು

helmet petrole

ಕೋಲ್ಕೊತಾ: ಸುಪ್ರೀಂ ಕೋರ್ಟ್ ಆದೇಶದಂತೆ ಅನೇಕ ರಾಜ್ಯಗಳಲ್ಲಿ ಹೆಲ್ಮೆಟ್ ಕಡ್ಡಾಯ ಆದೇಶ ಜಾರಿಗೊಳಿಸಲಾಗಿದ್ದು, ರಸ್ತೆ ಸುರಕ್ಷತೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೂ ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುವುದು ಕಡಿಮೆಯಾಗಿಲ್ಲ.

ದ್ವಿಚಕ್ರವಾಹನ ಅಪಘಾತಗಳು ಹೆಚ್ಚಿದ್ದು, ಅದರಲ್ಲಿಯೂ ಹೆಲ್ಮೆಟ್ ಇಲ್ಲದ ಕಾರಣಕ್ಕೆ ಸಾವು ನೋವು ಸಂಭವಿಸುತ್ತವೆ. 2 ದಿನದ ಹಿಂದೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬೈಕ್ ಸವಾರರು ಹೆಲ್ಮೆಟ್ ಹಾಕದ ಕಾರಣ ಸಾವಿನ ಸಂಖ್ಯೆ ಹೆಚ್ಚಿದೆ ಎಂದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೋಲ್ಕೊತಾ ಪೊಲೀಸರು, ದ್ವಿಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಕಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹೆಲ್ಮೆಟ್ ಇಲ್ಲದ ದ್ವಿಚಕ್ರವಾಹನ ಸವಾರರಿಗೆ ಪೆಟ್ರೋಲ್ ಹಾಕದಂತೆ ಬಂಕ್ ಮಾಲೀಕರಿಗೆ ಸೂಚನೆ ನೀಡಿದ್ದು, ‘ನೋ ಹೆಲ್ಮೆಟ್ ನೋ ಪೆಟ್ರೋಲ್’ ನಿಯಮ ಜಾರಿಗೆ ತಂದಿದ್ದಾರೆ. ಹೆಲ್ಮೆಟ್ ಹಾಕದ ದ್ವಿಚಕ್ರವಾಹನ ಸವಾರರಿಗೆ ಪೆಟ್ರೋಲ್ ಕೊಡದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...