alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ 4 ತಿಂಗಳ ಗರ್ಭಿಣಿ

ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ಗರ್ಭಿಣಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆ ದೃಶ್ಯವನ್ನು ಸೆಲ್ಫಿ ವಿಡಿಯೋ ರೆಕಾರ್ಡ್ ಮಾಡಿಟ್ಟಿದ್ದಾಳೆ. ಕಳೆದ ಆಗಸ್ಟ್ ನಲ್ಲಿ ಮದುವೆಯಾಗಿದ್ದ ಮಹಿಳೆ, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು. ಪತಿಯ ಬಗ್ಗೆ ತನಗೆ ಆಸಕ್ತಿಯಿಲ್ಲ ಅಂತಾ ವಿಡಿಯೋದಲ್ಲಿ ಹೇಳಿಕೊಂಡಿದ್ದಾಳೆ.

ಆತನ ಜೊತೆ ಸಂಬಂಧ ಮುಂದುವರಿಸಲು ಸಾಧ್ಯವಿಲ್ಲ ಎಂದಿರೋ ಮಹಿಳೆ, ತನ್ನ ತಂದೆ-ತಾಯಿ ಬಳಿ ಕ್ಷಮೆ ಕೇಳಿದ್ದಾಳೆ. ಮದುವೆ ಸಂದರ್ಭದಲ್ಲಿ ನೀಡಿರುವ ಹಣ, ಆಭರಣ ಮತ್ತು ಇತರ ವಸ್ತುಗಳನ್ನೆಲ್ಲ ಪತಿಯಿಂದ ವಾಪಸ್ ತೆಗೆದುಕೊಳ್ಳಿ ಅಂತಾ ಸೂಚಿಸಿದ್ದಾಳೆ. ವರದಕ್ಷಿಣೆ ವ್ಯವಹಾರವನ್ನು ಬಗೆಹರಿಸಿಕೊಳ್ಳಿ ಎಂದಿದ್ದಾಳೆ.

ಜನವರಿ ತಿಂಗಳಲ್ಲಿ ಆಕೆ ಸಂಕ್ರಾಂತಿ ಹಬ್ಬಕ್ಕಾಗಿ ತವರು ಮನೆಗೆ ತೆರಳುವವಳಿದ್ಲು. ಆದ್ರೆ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...