alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಲ್ಮೆಟ್ ಧರಿಸಿಲ್ಲವಾದ್ರೆ ಸಿಗಲ್ಲ ಪೆಟ್ರೋಲ್..!

lkw_0twotrw

ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ಹೊಸ ನಿಯಮವೊಂದು ಜಾರಿಯಾಗಿದೆ. ಅಪಘಾತ ತಡೆಗಟ್ಟುವ ಉದ್ದೇಶದಿಂದ ಎಸ್ ಎಸ್ಪಿ ದೀಪಕ್ ಕುಮಾರ್ ಹೊಸ ರೂಲ್ಸ್ ಜಾರಿ ಮಾಡಿದ್ದಾರೆ. ಹೆಲ್ಮೆಟ್ ಇಲ್ಲದೆ ಪೆಟ್ರೋಲ್ ಬಂಕ್ ಗೆ ಬಂದ ದ್ವಿಚಕ್ರ ವಾಹನ ಚಾಲಕರಿಗೆ ಇನ್ಮುಂದೆ ಪೆಟ್ರೋಲ್ ಸಿಗೋದಿಲ್ಲ.

ಹೊಸ ನಿಯಮ ಸೋಮವಾರದಿಂದ ಜಾರಿಗೆ ಬಂದಿದೆ. ಇದ್ರ ಪ್ರಕಾರ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರು ಹಾಗೂ ಸೀಟ್ ಬೆಲ್ಟ್ ಹಾಕಿಕೊಳ್ಳದ ಕಾರು ಚಾಲಕರಿಗೆ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಸಿಗೋದಿಲ್ಲ. ಹೊಸ ನಿಯಮಕ್ಕೆ ಸಂಬಂಧಿಸಿದಂತೆ ದೀಪಕ್ ಕುಮಾರ್ ಪೆಟ್ರೋಲ್ ಬಂಕ್ ಅಸೋಸಿಯೇಷನ್ ಜೊತೆ ಹಿಂದಿನ ಮಂಗಳವಾರ ಮಾತುಕತೆ ನಡೆಸಿದ್ದರು.

ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ನಿಯಮದಿಂದ ಜನರು ಜಾಗೃತರಾಗ್ತಾರೆ. ಹಾಗೆ ರಸ್ತೆ ಅಪಘಾತಗಳನ್ನು ತಡೆಗಟ್ಟಬಹುದೆಂದು ಎಸ್ ಎಸ್ಪಿ ಹೇಳಿದ್ದಾರೆ. ಪೆಟ್ರೋಲ್ ಬಂಕ್ ನಲ್ಲಿ ಸಿಸಿ ಟಿವಿ ಅಳವಡಿಸಲಾಗಿದ್ದು ನಿಗಾ ಇಡುವುದಾಗಿ ದೀಪಕ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...