alex Certify
ಕನ್ನಡ ದುನಿಯಾ       Mobile App
       

Kannada Duniya

ಶನಿವಾರದಂದು ಶಾಲಾ ಮಕ್ಕಳಿಗಿಲ್ಲ ಬ್ಯಾಗ್ ಹೊರೆ

school-bag-68ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆನೇಕ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳ ನಡುವಿನ ತಾರತಮ್ಯ ಹೋಗಲಾಡಿಸಲು ಸರ್ಕಾರಿ ಶಾಲಾ ಮಕ್ಕಳ ಯೂನಿಫಾರಂ ಬದಲಾವಣೆಗೆ ತೀರ್ಮಾನಿಸಿದ್ದ ಸರ್ಕಾರ, ಈಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ಇನ್ನು ಮುಂದೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ಶನಿವಾರದಂದು ಶಾಲೆಗೆ ಬ್ಯಾಗ್ ಹೊರೆ ಹೊತ್ತು ಬರುವುದಕ್ಕೆ ಕಡಿವಾಣ ಹಾಕಲಾಗಿದೆ. ಈ ದಿನದಂದು ಮಕ್ಕಳ ಬೆಳವಣಿಗೆಗೆ ಪೂರಕವಾಗುವ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಪ್ರೇರೇಪಿಸಲಾಗುತ್ತದೆ.

ಶಿಕ್ಷಣ ಮಂತ್ರಿಯೂ ಆಗಿರುವ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಅವರ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಅಲ್ಲದೆ ಶಿಕ್ಷಕರನ್ನು ಜನಗಣತಿ, ಚುನಾವಣಾ ಕರ್ತವ್ಯಗಳಿಗೆ ನಿಯೋಜನೆ ಮಾಡದಿರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...