alex Certify
ಕನ್ನಡ ದುನಿಯಾ       Mobile App
       

Kannada Duniya

ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿ ಆದರೆ ನಡೆದಿದ್ದೇನು ಗೊತ್ತಾ….?

ನೊಯ್ಡಾದಲ್ಲಿ ಡಿಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ 17 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಆತ ಬೋರ್ಡ್ ಎಕ್ಸಾಮ್ ಬರೆಯಲು ತೆರಳುತ್ತಿದ್ದ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು.

ಆದ್ರೆ ಎರಡು ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಆತ ಸಾವನ್ನಪ್ಪಿದ್ದಾನೆ. 10ನೇ ತರಗತಿ ವಿದ್ಯಾರ್ಥಿಯಾಗಿದ್ದ ಪ್ರಾಂಜಲ್ ಮೃತ ದುರ್ದೈವಿ. ಇಂದು ಆತನಿಗೆ ಇಂಗ್ಲಿಷ್ ಪರೀಕ್ಷೆಯಿತ್ತು. ಬೆಳಗ್ಗೆ 6.45ರ ವೇಳೆಗೆ ಗೆಳೆಯ ತಲೀಮ್ ನನ್ನು ಬೈಕ್ ನಲ್ಲಿ ಕೂರಿಸಿಕೊಂಡು ತೆರಳುತ್ತಿದ್ದ.

ಮೊದಲು ಪ್ರಾಂಜಲ್ ನನ್ನು ಮ್ಯಾಕ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಯ್ತು. ಅಲ್ಲಿನ ವೈದ್ಯರು ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ನಂತರ ಕೈಲಾಶ್ ಆಸ್ಪತ್ರೆಗೆ ಕರೆದೊಯ್ಯಲಾಯ್ತು. ಅಲ್ಲಿ ಸಹ ವಿದ್ಯಾರ್ಥಿಯನ್ನು ಅಡ್ಮಿಟ್ ಮಾಡಿಕೊಂಡಿಲ್ಲ. ಜಿಲ್ಲಾಸ್ಪತ್ರೆಗೆ ಕರೆತರುವಷ್ಟರಲ್ಲಿ ಪ್ರಾಂಜಲ್ ಮೃತಪಟ್ಟಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...