alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಕೇರ್ ಗೆ ಬಿಜೆಪಿಯೇತರ ರಾಜ್ಯಗಳ ವಿರೋಧ

ಮೋದಿ ಕೇರ್ ಅಡಿಯಲ್ಲಿ ನೀಡಲಾಗ್ತಿರುವ 5 ಲಕ್ಷ ರೂಪಾಯಿ ಆರೋಗ್ಯ ವಿಮಾ ಯೋಜನೆಯಲ್ಲಿ ರಾಜಕೀಯ ಶುರುವಾಗಿದೆ. ಬಿಜೆಪಿ ಅಧಿಕಾರದಲ್ಲಿರದ ರಾಜ್ಯಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ವಿರೋಧ ವ್ಯಕ್ತವಾಗ್ತಿದೆ. ದೆಹಲಿ, ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯಗಳಲ್ಲಿ ಈ ಯೋಜನೆ ಜಾರಿಗೆ ತರದಿರಲು ಸ್ಥಳೀಯ ಸರ್ಕಾರಗಳು ಮುಂದಾಗಿವೆ.

ಜೂನ್ 15ರೊಳಗೆ ಎಲ್ಲ ರಾಜ್ಯಗಳಲ್ಲೂ ಈ ಯೋಜನೆ ಅನುಷ್ಠಾನಗೊಳ್ಳಬೇಕೆಂಬ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಏಪ್ರಿಲ್ ನಲ್ಲಿ ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಸಭೆ ನಡೆಸಲಾಗಿತ್ತು. ಮೇ ತಿಂಗಳಿನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಲಾಗಿತ್ತು. 17 ರಾಜ್ಯಗಳು ಈಗಾಗಲೇ ಕೆಲಸ ಶುರು ಮಾಡಿವೆ.

ದೆಹಲಿ, ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಕರ್ನಾಟದಲ್ಲಿ ಸರ್ಕಾರ ಬದಲಾವಣೆಯಾಗಿದ್ದು, ಅದ್ರ ನಿರ್ಧಾರ ಇನ್ನೂ ಹೊರ ಬಿದ್ದಿಲ್ಲ. ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಇದಕ್ಕೆ ಒಪ್ಪಿಗೆ ನೀಡಿದ್ದರು. ಆದ್ರೆ ಈಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು, ಯಾವ ನಿರ್ಧಾರ ತೆಗೆದುಕೊಳ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಿರೋಧ ವ್ಯಕ್ತಪಡಿಸಿದ ರಾಜ್ಯಗಳ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಇದ್ರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಈಗಾಗ್ಲೇ ಬಿಪಿಎಲ್ ಕಾರ್ಡ್ ದಾರರಿಗೆ ಉತ್ತಮ ಆರೋಗ್ಯ ವಿಮೆ ಇದೆ. ಹಾಗಾಗಿ ಇದ್ರ ಅವಶ್ಯಕತೆಯಿಲ್ಲ ಎಂದಿದ್ದಾರೆ. ಆದ್ರೆ ಮೂಲಗಳು ಇದೆಲ್ಲ ರಾಜಕೀಯ ಗಿಮಿಕ್ ಎನ್ನುತ್ತಿವೆ. ಆರೋಗ್ಯ ವಿಮೆಯಿಂದ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗದಿರಲಿ ಎನ್ನುವ ಕಾರಣಕ್ಕೆ ಪಕ್ಷಗಳು ಈ ತಂತ್ರ ಹೆಣೆದಿವೆ ಎನ್ನಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...