alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಮಳೆ, ಪ್ರವಾಹಕ್ಕೆ ಕೊಚ್ಚಿ ಹೋಯ್ತು ಬಸ್

ಹಿಮಾಚಲ ಪ್ರದೇಶ ಭಾರೀ ಮಳೆ ಮತ್ತು ಹಿಮಪಾತಕ್ಕೆ ತತ್ತರಿಸಿ ಹೋಗಿದೆ. ಭಾರೀ ಮಳೆ ಪ್ರವಾಹವನ್ನು ಸೃಷ್ಟಿ ಮಾಡಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮನಾಲಿಯಲ್ಲಿ ಭಾರೀ ಮಳೆಗೆ ಬಿಯಾಸ್ ನದಿ ತುಂಬಿ ಹರಿಯುತ್ತಿದೆ. ಇದ್ರ ಆರ್ಭಟಕ್ಕೆ ಬಸ್ ಕೊಚ್ಚಿ ಹೋಗಿದೆ. ಅದ್ರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ಒಂದೇ ಅಲ್ಲ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟ್ರಕ್ ಒಂದು ನದಿಗೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಹ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಶುರುವಾಗಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಲಾಗ್ತಿದೆ. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ಬರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಸೋಮವಾರದಿಂದ ಹಿಮಾಚಲ ಪ್ರದೇಶದ ಇನ್ನೂ ಅನೇಕ ಕಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...