alex Certify
ಕನ್ನಡ ದುನಿಯಾ       Mobile App
       

Kannada Duniya

ಇಂಧನ ದರ ಏರಿಕೆ ಬಿಸಿ ನನಗಿಲ್ಲ ಎಂದ ಕೇಂದ್ರ ಸಚಿವ

ಜೈಪುರ: ಕೇಂದ್ರ ಸಚಿವ ರಾಮದಾಸ್ ಅಠವಾಳೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪೆಟ್ರೋಲ್ ದರಕ್ಕೆ ಸಂಬಂಧಿಸಿದಂತೆ ವಿಚಿತ್ರ ಹೇಳಿಕೆ ನೀಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.

ಜೈಪುರಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಅಠವಾಳೆ, ಕೇಂದ್ರ ಸಚಿವನಾಗಿರುವುದರಿಂದ ಇಂಧನ ದರ ಏರಿಕೆಯಾದರೂ ನನಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಸಚಿವ ಸ್ಥಾನ ಕಳೆದುಕೊಂಡ ಬಳಿಕ ಇದರ ಬಿಸಿ ಅರಿವಾಗಬಹುದು ಎಂದಿದ್ದಾರೆ.

ಆದರೆ ಈ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಳ್ಳುವುದು ಖಚಿತವಾಗುತ್ತಿದ್ದಂತೆ ಇದಕ್ಕೆ ಸ್ಪಷ್ಟನೆ ನೀಡಿರುವ ಸಚಿವರು, ಸಾಮಾನ್ಯ ಜನರಿಗೆ ಪೆಟ್ರೋಲ್ ದರ ಏರಿಕೆಯಾಗುತ್ತಿರುವುದರಿಂದ ತೊಂದರೆಯಾಗುತ್ತಿರುವುದು ತಿಳಿದಿರುವ ವಿಚಾರ. ಬೆಲೆ ಕಡಿತಗೊಳಿಸುವುದು ಸರಕಾರಗಳ ಕರ್ತವ್ಯ. ಪ್ರಧಾನಿ ನರೇಂದ್ರ ಮೋದಿ ಅವರು ಬೆಲೆ ಕಡಿತಗೊಳಿಸುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದ್ದಾರೆ ಎಂದು ಭರವಸೆ ನೀಡಿದ್ದಾರೆ.

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ತೈಲ ಬೆಲೆ ಕುರಿತು ಕೇಂದ್ರ ಸರಕಾರ ಗಂಭೀರ ಚರ್ಚೆ ನಡೆಸುತ್ತಿದೆ. ಕೇಂದ್ರದೊಂದಿಗೆ ರಾಜ್ಯ ಸರಕಾರಗಳು ಪೆಟ್ರೋಲ್ ಮೇಲಿನ ತೆರಿಗೆ ಇಳಿಸಿದರೆ, ದರ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...