alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಚಾಲನೆ ವೇಳೆ ಮೊಬೈಲ್ ಬಳಸಿದ್ರೆ ರದ್ದಾಗುತ್ತೆ ‘ಲೈಸೆನ್ಸ್’

ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಹೀಗಾಗಿ ವೇಗದ ಚಾಲನೆ ಚಾಲನೆ, ಚಾಲನೆ ಮಾಡುವಾಗ ಮೊಬೈಲ್ ಬಳಕೆ, ಸಿಗ್ನಲ್ ಜಂಪ್, ವಾಣಿಜ್ಯ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ ಸೇರಿದಂತೆ ಒಟ್ಟು 6 ಪ್ರಮುಖ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ಚಾಲಕರ ಚಾಲನಾ ಪರವಾನಿಗೆ ಪತ್ರ( ಡಿ.ಎಲ್.) ವನ್ನು ಮೂರು ತಿಂಗಳವರೆಗೆ ರದ್ದುಪಡಿಸಲಾಗುತ್ತದೆ.

ಹೊಸ ನಿಯಮಾವಳಿ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಹೆದ್ದಾರಿ ವರಿಷ್ಠಾಧಿಕಾರಿ ವಿಜಯ್ ಪಾಟೀಲ್, ಈ ನಿಯಮಗಳ ಉಲ್ಲಂಘನೆಗೆ ಹೆಚ್ಚಿನ ಮೊತ್ತದ ದಂಡ ವಿಧಿಸಿದರೂ ವಾಹನ ಸವಾರರು ನಿಯಮ ಪಾಲಿಸುತ್ತಿಲ್ಲ. ಹೀಗಾಗಿ ಲೈಸೆನ್ಸ್ ರದ್ದು ಮಾಡುವ ಅಧಿಕಾರವನ್ನು ಆರ್.ಟಿ.ಓ. ಗಳಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...