alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಹಿರಿಯ ನಾಯಕ

ಕಳೆದ 52 ವರ್ಷಗಳಿಂದಲೂ ರಾಜಕಾರಣದಲ್ಲಿ ಸಕ್ರಿಯವಾಗಿರುವ ಹಿರಿಯ ರಾಜಕೀಯ ನೇತಾರ ಶರದ್ ಪವಾರ್, ತಾವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಹೇಳುವ ಮೂಲಕ ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ದಾರೆ.

ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 77 ವರ್ಷದ ಶರದ್ ಪವಾರ್, ಕಾಲೇಜು ದಿನಗಳಲ್ಲಿ ತಾವು ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದು, ಬಳಿಕ ವಿಧಾನಸಭೆ ಹಾಗೂ ಲೋಕಸಭೆಗೆ ಚುನಾಯಿತನಾಗಿದ್ದೆ ಎಂದು ತಮ್ಮ ರಾಜಕೀಯ ಬದುಕನ್ನು ಮೆಲಕು ಹಾಕಿದ್ದಾರೆ.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರೂ ಆಗಿರುವ ಶರದ್ ಪವಾರ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲವೆಂದು ಹೇಳುವ ಮೂಲಕ ಮುಂದಿನ ದಿನಗಳಲ್ಲಿ ರಾಜಕೀಯದಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...