alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಯನ್ನೇ ಪೀಡಿಸಿದ ಶಿಕ್ಷಕನಿಗೆ ಗ್ರಾಮಸ್ಥರು ಮಾಡಿದ್ದೇನು?

ಓಡಿಶಾದ ಮಯೂರ್ ಭಂಜ್ ಜಿಲ್ಲೆಯಲ್ಲಿ ಶಾಲೆಯ ಮುಖ್ಯಶಿಕ್ಷಕರೇ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು 6ನೇ ತರಗತಿಯ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಪೊಲೀಸರು ಈಗಾಗ್ಲೇ ಮುಖ್ಯೋಪಾಧ್ಯಾಯರನ್ನು ಬಂಧಿಸಿದ್ದಾರೆ. ಬಾಲಕಿ ಶಾಲೆಗೆ ಹೋಗಲು ನಿರಾಕರಿಸಿದ್ಲು.

ಕಾರಣ ವಿಚಾರಿಸಿದಾಗ ಮುಖ್ಯಶಿಕ್ಷಕರು ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದಾಳೆ. ವಿಷಯ ಗೊತ್ತಾಗ್ತಿದ್ದಂತೆ ಗ್ರಾಮಸ್ಥರು ರೊಚ್ಚಿಗೆದ್ದಿದ್ರು. ಕೂಡಲೇ ಮುಖ್ಯಶಿಕ್ಷಕನನ್ನು ಎಳೆದು ತಂದು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಪೊಲೀಸರು ಶಿಕ್ಷಕನನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಸುಮಾರು ಒಂದು ತಿಂಗಳಿನಿಂದ ಆತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗ್ತಿದೆ. ಆದ್ರೆ ಶಿಕ್ಷಕ ಮಾತ್ರ ಈ ಆರೋಪವನ್ನು ತಳ್ಳಿಹಾಕಿದ್ದಾನೆ. ತನ್ನ ಮೇಲಿನ ಆರೋಪ ನಿಜವೆಂದು ಸಾಬೀತಾದಲ್ಲಿ ತಾನು ಸಾಯಲು ಕೂಡ ಸಿದ್ಧನಿದ್ದೇನೆ ಅಂತಾ ಸವಾಲು ಹಾಕಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...