alex Certify
ಕನ್ನಡ ದುನಿಯಾ       Mobile App
       

Kannada Duniya

ಎಎಪಿಯ 20 ಶಾಸಕರಿಗೆ ಬಿಗ್ ರಿಲೀಫ್

ಲಾಭದಾಯಕ ಹುದ್ದೆ ಹೊಂದಿರುವ  ದೆಹಲಿಯ 20 ಶಾಸಕರನ್ನು ಅನರ್ಹಗೊಳಿಸುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರದ ಅಧಿಸೂಚನೆಯನ್ನು ದೆಹಲಿ ಹೈಕೋರ್ಟ್ ಅಮಾನ್ಯ ಮಾಡಿದೆ. ಇದರಿಂದಾಗಿ ಅನರ್ಹತೆ ಭೀತಿಯಲ್ಲಿದ್ದ 20 ಶಾಸಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ವಿಚಾರಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಶಾಸಕರನ್ನು ಅನರ್ಹಗೊಳಿಸುವ ಮುನ್ನ ಚುನಾವಣಾ ಆಯೋಗ ಅವರಿಂದ ಸೂಕ್ತ ವಿವರಣೆ ಪಡೆದಿಲ್ಲವಾದ್ದರಿಂದ ಮರು ವಿಚಾರಣೆ ಮಾಡುವಂತೆ ಸೂಚನೆ ನೀಡಿದೆ.

ಇದಕ್ಕೆ ಚುನಾವಣಾ ಆಯೋಗ ಕೂಡ ಸಮ್ಮತಿಸಿದೆ. ಲಾಭದಾಯಕ ಹುದ್ದೆ ಹೊಂದಿದ ಹಿನ್ನೆಲೆಯಲ್ಲಿ 20 ಆಪ್ ಶಾಸಕರನ್ನು ಅನರ್ಹಗೊಳಿಸಲು ಚುನಾವಣಾ ಆಯೋಗ ಶಿಫಾರಸು ಮಾಡಿತ್ತು. ಇದಕ್ಕೆ ರಾಷ್ಟ್ರಪತಿಗಳು ಕೂಡ ಅಂಕಿತ ಹಾಕಿದ್ದರು. ಇದೀಗ ನ್ಯಾಯಾಲಯ ನೀಡಿರುವ ಆದೇಶವನ್ನು ಆಪ್ ನಾಯಕ, ಸಿಎಂ ಅರವಿಂದ್ ಕೇಜ್ರಿವಾಲ್ ಸ್ವಾಗತಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...