alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡ ದಿನ ರಾಹುಲ್ ಮಾಡಿದ್ದೇನು ಗೊತ್ತಾ?

ದೇಶದ ಜನತೆಯ ಕುತೂಹಲ ಕೆರಳಿಸಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಗುಜರಾತ್ ನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಳ್ಳುವಲ್ಲಿ ಸಫಲವಾಗಿರುವುದಲ್ಲದೇ ಕಾಂಗ್ರೆಸ್ ಆಡಳಿತವಿದ್ದ ಹಿಮಾಚಲ ಪ್ರದೇಶದಲ್ಲೂ ಅಧಿಕಾರದ ಗದ್ದುಗೆಗೇರಿದೆ.

ಗುಜರಾತ್ ನಲ್ಲಿ ಕಾಂಗ್ರೆಸ್ 22 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಆಡಳಿತರೂಢ ಬಿಜೆಪಿಗೆ ಪ್ರಬಲ ಸ್ಪರ್ಧೆಯೊಡ್ಡಿದ್ದು, ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವಲ್ಲಿ ಸಫಲವಾಗಿದೆ. ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬಂದ ಈ ಫಲಿತಾಂಶ ರಾಹುಲ್ ಗಾಂಧಿಯವರಿಗೂ ಕೊಂಚ ಸಮಾಧಾನ ತಂದಂತಿದೆ. ಹಾಗಾಗಿಯೇ ಗುಜರಾತ್ ನಲ್ಲಿ ತಾವು ಸೋತು ಗೆದ್ದಿರುವುದಾಗಿ ಕಾಂಗ್ರೆಸ್ ನಾಯಕರು ಹೇಳತೊಡಗಿದ್ದಾರೆ.

ಈ ಮಧ್ಯೆ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ರಾಹುಲ್ ಗಾಂಧಿಯವರ ನಡೆಯೊಂದು ಈಗ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ವಿಜಯ ಸಾಧಿಸಿರುವುದಕ್ಕೆ ಅತ್ತ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಅಭಿನಂದಿಸುವಲ್ಲಿ ಬ್ಯುಸಿಯಾಗಿದ್ದರೆ ಇತ್ತ ರಾಹುಲ್ ಗಾಂಧಿ ತಮ್ಮ ನಾಲ್ವರು ಸ್ನೇಹಿತರೊಂದಿಗೆ ದೆಹಲಿಯ ಸಿನಿಮಾ ಹಾಲ್ ಒಂದರಲ್ಲಿ ಹಾಲಿವುಡ್ ಚಿತ್ರ ‘ಸ್ಟಾರ್ ವಾರ್ಸ್’ ವೀಕ್ಷಿಸುತ್ತಿದ್ದರೆಂದು ಹೇಳಲಾಗಿದೆ. ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...