alex Certify
ಕನ್ನಡ ದುನಿಯಾ       Mobile App
       

Kannada Duniya

ಖರೀದಿ ನೆಪದಲ್ಲಿ ಬಂದು 25 ಲಕ್ಷ ರೂ. ಮೌಲ್ಯದ ಚಿನ್ನ ದೋಚಿ ಪರಾರಿ

ಆಭರಣ ಖರೀದಿ ನೆಪದಲ್ಲಿ ಅಂಗಡಿಗೆ ಬಂದಿದ್ದ ಓರ್ವ ಪುರುಷ ಹಾಗೂ ಓರ್ವ ಮಹಿಳೆ ಮಾಲೀಕನ ಮೇಲೆ ಹಲ್ಲೆ ನಡೆಸಿ ಸುಮಾರು 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 4 ಲಕ್ಷ ರೂ. ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಅಂಗಡಿ ಬಾಗಿಲು ಮುಚ್ಚುವ ಸಂದರ್ಭದಲ್ಲಿ ಅಂಗಡಿಗೆ ಬಂದ ಇವರುಗಳು ಬಳಿಕ ಪಿಸ್ತೂಲು ತೋರಿಸಿ, ಮಾಲೀಕನ ಕಣ್ಣಿಗೆ ಖಾರದ ಪುಡಿಯನ್ನು ಎರಚಿದ್ದಾರೆ. ಎದೆಗುಂದದ ಮಾಲೀಕ ಅವರ ಜೊತೆ ಫೈಟ್​ ಮಾಡಿದ್ದು, ಆದರೂ ಚಿನ್ನಾಭರಣ ದೋಚಿಕೊಂಡು ಹೋಗುವುದರಲ್ಲಿ ಯಶಸ್ವಿಯಾಗಿದ್ದಾರೆ.

ಹಲ್ಲೆ ಮಾಡಿದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ಪರಿಶೀಲಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಗಾಯಗೊಂಡಿರುವ ಅಂಗಡಿ ಮಾಲೀಕ ಜಯರಾಮ್ ನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...