alex Certify
ಕನ್ನಡ ದುನಿಯಾ       Mobile App
       

Kannada Duniya

ರೋಡ್ ರೋಮಿಯೋಗಳ ಬೆವರಿಳಿಸ್ತಿದ್ದಾರೆ ಯೋಗಿ….

anti-romeo-squad_650x400_41490169374

ಉತ್ತರಪ್ರದೇಶದ ನೂತನ ಸಿಎಂ ಯೋಗಿ ಆದಿತ್ಯನಾಥ್ ರೋಡ್ ರೋಮಿಯೋಗಳಿಗೆ ಮೂಗುದಾರ ಹಾಕಲು ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಆ್ಯಂಟಿ ರೋಮಿಯೋ ದಳವನ್ನು ರಚಿಸಲಾಗಿದ್ದು, ಈಗಾಗ್ಲೇ ಕಾರ್ಯಾಚರಣೆ ಆರಂಭವಾಗಿದೆ. ಕಾಲೇಜು, ಮಾಲ್, ಪಾರ್ಕ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ಹೆಣ್ಣುಮಕ್ಕಳ ಶಾಲೆ ಮತ್ತು ಕಾಲೇಜಿನ ಬಳಿ ಅನುಮಾನಾಸ್ಪದವಾಗಿ ಓಡಾಡುವ ಪುಂಡರನ್ನೆಲ್ಲ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಲಖ್ನೌನಲ್ಲಿ ಮೂವರನ್ನು ಬಂಧಿಸಲಾಗಿದೆ. ಝಾನ್ಸಿಯಲ್ಲಿ ಹುಡುಗಿ ಜೊತೆ ಕುಳಿತು ಕೀಟಲೆ ಮಾಡ್ತಾ ಇದ್ದ ವ್ಯಕ್ತಿಯೊಬ್ಬನಿಗೆ ಎಚ್ಚರಿಕೆ ನೀಡಿದ ಪೊಲೀಸ್ರು, ಆತನಿಂದ ಬಸ್ಕಿ ಹೊಡೆಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಉತ್ತರಪ್ರದೇಶ ಜನತೆಗೆ ಬಿಜೆಪಿ ನೀಡಿದ ಭರವಸೆಯನ್ನೆಲ್ಲ ಈಡೇರಿಸುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಮಹಿಳೆಯರ ಸುರಕ್ಷತೆ ಕಾಪಾಡಲು ಆ್ಯಂಟಿ ರೋಮಿಯೋ ಸ್ಕ್ವಾಡ್ ಕಾರ್ಯಾಚರಣೆಗಿಳಿದಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...