alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಲಿಂಗ ಸಂಬಂಧ’ಕ್ಕೆ ಸಿಕ್ತು ಕಾನೂನಿನ ಮಾನ್ಯತೆ…!

ಸಲಿಂಗ ಕಾಮಿಗಳಿಗೆ ಸುಪ್ರೀಂ ಕೋರ್ಟ್ ಸಿಹಿ ಸುದ್ದಿ ನೀಡಿದೆ. ಇಂದು ಐವರು ನ್ಯಾಯಾಧೀಶರ ಸಂವಿಧಾನಿಕ ಪೀಠ, ಭಾರತದಲ್ಲಿ ಸಲಿಂಗ ಕಾಮ ಅಪರಾಧವಲ್ಲ ಎಂದು ತಿಳಿಸಿದೆ.

ಐಪಿಸಿ ಸೆಕ್ಷನ್ 377 ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಕೋರ್ಟ್ ತೀರ್ಪು ನೀಡಿದೆ. ಸುಪ್ರೀಂಕೋರ್ಟ್ ತೀರ್ಪು ನೀಡ್ತಾ ಇದ್ದಂತೆ ಸಲಿಂಗ ಕಾಮಿಗಳು ಸಂಭ್ರಮಾಚರಣೆ ನಡೆಸಿದ್ದಾರೆ. ದೀಪಕ್ ಮಿಶ್ರಾ ನೇತೃತ್ವದ ನ್ಯಾಯ ಪೀಠ, ಜುಲೈ 17 ರಂದು ವಿಚಾರಣೆ ಅಂತ್ಯಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.

ತೀರ್ಪು ಪ್ರಕಟಿಸಿದ ಪೀಠ, ಸಲಿಂಗಿಗಳಿಗೆ ಬಾಳುವ ಅವಕಾಶ ಇದೆ. ವೈವಿಧ್ಯತೆಯ ಶಕ್ತಿಯನ್ನು ಗೌರವಿಸುವ ಅಗತ್ಯ ಇರೋದಾಗಿ ಕೋರ್ಟ್ ತಿಳಿಸಿದೆ. ಈ ಮೂಲಕ 156 ವರ್ಷದ ಕಾನೂನಿಗೆ ತಿಲಾಂಜಲಿ ಇಟ್ಟಿದೆ.

ಐಪಿಸಿ ಸೆಕ್ಷನ್ 377 ಪ್ರಕಾರ ಗಂಡು, ಹೆಣ್ಣು ಅಥವಾ ಪ್ರಾಣಿಗಳ ಜೊತೆ ಪ್ರಕೃತಿಗೆ ವಿರುದ್ಧವಾಗಿ ಸಂಪರ್ಕ ನಡೆಸುವುದು ಅಪರಾಧ ಎಂದು ತಿಳಿಸುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...