alex Certify
ಕನ್ನಡ ದುನಿಯಾ       Mobile App
       

Kannada Duniya

ಗಗನಸಖಿ ಜೊತೆ ಅಸಭ್ಯವಾಗಿ ವರ್ತಿಸಿ ಪೊಲೀಸರ ಅತಿಥಿಯಾದ ಪ್ರಯಾಣಿಕ

481371-indigoairlines

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಮಯದಲ್ಲಿ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ ಮೊಬೈಲ್​ನಲ್ಲಿ ಗಗನ ಸಖಿಯ ವಿಡಿಯೋ ತೆಗೆದ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾದ ಘಟನೆ ನಡೆದಿದೆ.

ಹೌದು. ಕೋಲ್ಕತ್ತಾದಿಂದ ಮುಂಬೈಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಮೂವರು ಪ್ರಯಾಣಿಕರು ಅಸಭ್ಯವಾಗಿ ವರ್ತಿಸಿದ್ದು ಮಾತ್ರವಲ್ಲ, ಮೊಬೈಲ್ ಮೂಲಕ ಗಗನಸಖಿಯ ವಿಡಿಯೋ ತೆಗೆದಿದ್ದಾರೆ. ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ವಿಮಾನದ ಸಿಬ್ಬಂದಿಗೆ ಈ ವಿಷಯವನ್ನು ತಿಳಿಸಿದ್ದು, ಮುಂಬೈನಲ್ಲಿ ವಿಮಾನ ಇಳಿದ ನಂತರ ಅಸಭ್ಯ ವರ್ತನೆ ತೋರಿದ ಮೂವರನ್ನೂ ಪೊಲೀಸರ ವಶಕ್ಕೆ ಒಪ್ಪಿಸಲಾಯಿತು ಎನ್ನಲಾಗಿದೆ.

ಈ ನಡುವೆ ಇದರಲ್ಲಿ ಇಬ್ಬರು, ತಮಗೂ ಈ ಘಟನೆಗೂ ಏನೂ ಸಂಬಂಧವಿಲ್ಲ. ನಾವು ಆತನ ಜತೆಗಿದ್ದೆವು ಅಷ್ಟೇ ಎಂದು ಸ್ಪಷ್ಟೀಕರಣ ನೀಡಿದ್ದು, ಈ ಹಿನ್ನಲೆಯಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...