alex Certify
ಕನ್ನಡ ದುನಿಯಾ       Mobile App
       

Kannada Duniya

”ಸೊಳ್ಳೆಗಳ ನಿರ್ಮೂಲನೆ ದೇವರಿಂದ ಮಾತ್ರ ಸಾಧ್ಯ”

ಕೆಲವೊಂದು ವಿಚಾರಗಳಲ್ಲಿ ನಮ್ಮ ದೇಶದ ಸರ್ವೋಚ್ಛ ನ್ಯಾಯಾಲಯವೂ ಅಸಹಾಯಕವಾಗಿದೆ. ಇದನ್ನು ಸ್ವತಃ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ದಾನೇಶ್ ಲೆಶ್ಧನ್ ಎಂಬಾತ ಸೊಳ್ಳೆಗಳನ್ನು ಭಾರತದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ.

ಈ ಅರ್ಜಿ ವಿಚಾರಣೆ ನಡೆಸಿದ ಇಬ್ಬರು ನ್ಯಾಯಮೂರ್ತಿಗಳ ಪೀಠ, ನಾವು ದೇವರಲ್ಲ, ಇದು ದೇವರಿಂದ ಮಾತ್ರ ಸಾಧ್ಯವಾಗುವಂತಹ ಕೆಲಸ ಅಂತಾ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿ ಪ್ರಕಾರ ಸೊಳ್ಳೆಗಳಿಂದಾಗಿ ಜಗತ್ತಿನಲ್ಲಿ ಪ್ರತಿವರ್ಷ 725,000 ಜನರು ಸಾವನ್ನಪ್ಪುತ್ತಿದ್ದಾರೆ.

ಸೊಳ್ಳೆಗಳಿಂದ ಅನೇಕ ಬಗೆಯ ರೋಗಗಳು ಹರಡುತ್ತವೆ. ಹಾಗಾಗಿ ಸೊಳ್ಳೆಗಳನ್ನು ಸಂಪೂರ್ಣವಾಗಿ ಹೊಡೆದೋಡಿಸಲು ಅಧಿಕಾರಿಗಳಿಗೆ ನಿರ್ದೇಶನ ಕೊಡುವಂತೆ ದಾನೇಶ್ ಕೋರ್ಟ್ ಗೆ ಮನವಿ ಮಾಡಿದ್ದರು. ಯಾವ ಕೋರ್ಟ್ ಕೂಡ ಸೊಳ್ಳೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಂತೆ ಆದೇಶ ಹೊರಡಿಸಲು ಸಾಧ್ಯವಿಲ್ಲ ಅಂತಾ ಸುಪ್ರೀಂ ಕೋರ್ಟ್ ಅಸಹಾಯಕತೆ ವ್ಯಕ್ತಪಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...