alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆಗೂ ಮುನ್ನ ಬಜೆಟ್ ಮಂಡನೆಗೆ ವಿಪಕ್ಷಗಳ ತಗಾದೆ

budget-ec-759

ಫೆಬ್ರವರಿ 1 ಕ್ಕೆ ಅಂದ್ರೆ ಪಂಚ ರಾಜ್ಯಗಳ ಚುನಾವಣೆ ಆರಂಭಕ್ಕೂ ಮೊದಲೇ ಕೇಂದ್ರ ಸರ್ಕಾರ ಬಜೆಟ್ ಮಂಡಿಸಲು ಮುಂದಾಗಿರೋದು ವಿಪಕ್ಷಗಳಲ್ಲಿ ಅಸಮಾಧಾನ ಮೂಡಿಸಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಜೆಡಿಯು, ಹಾಗೂ ಆರ್ ಎಲ್ ಡಿ ಮುಖಂಡರು ಚುನಾವಣಾ ಆಯೋಗಕ್ಕೆ ಭೇಟಿ ನೀಡಿದ್ರು.

ಎಲೆಕ್ಷನ್ ಗೂ ಮೊದಲೇ ಬಜೆಟ್ ಮಂಡಿಸಿದ್ರೆ ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಲು ಸಾಧ್ಯವಿಲ್ಲ ಅಂತಾ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.

ಮಾರ್ಚ್ 8ರ ನಂತರ ಅಂದ್ರೆ ಚುನಾವಣೆ ಮುಗಿದ ಮೇಲೆ ಬಜೆಟ್ ಮಂಡಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ನಿನ್ನೆಯಷ್ಟೆ ಚುನಾವಣಾ ಆಯೋಗ ಪಂಚರಾಜ್ಯಗಳ ಮತದಾನ ದಿನಾಂಕವನ್ನು ಪ್ರಕಟಿಸಿತ್ತು. ಫೆಬ್ರವರಿ ನಾಲ್ಕರಿಂದ ಮತದಾನ ಆರಂಭವಾಗಲಿದೆ. ಮಾರ್ಚ್ 11ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಫೆಬ್ರವರಿ 28 ರ ಬದಲು ಫೆ.1 ಕ್ಕೆ ಬಜೆಟ್ ಮಂಡಿಸಲು ಕೇಂದ್ರ ಸರ್ಕಾರ ತಯಾರಿ ಮಾಡಿಕೊಂಡಿದೆ. ಚುನಾವಣೆಗೂ ಮುನ್ನ ಬಜೆಟ್ ಮಂಡಿಸಿದ್ರೆ ಮತದಾರರ ಮೇಲೆ ಸರ್ಕಾರ ಪ್ರಭಾವ ಬೀರಬಹುದು ಅನ್ನೋದು ಪ್ರತಿಪಕ್ಷಗಳ ಆತಂಕ. ಹಾಗಾಗಿ ಚುನಾವಣಾ ಪ್ರಕ್ರಿಯೆ ಮುಗಿಯುವ ಮುನ್ನ ಬಜೆಟ್ ಮಂಡಿಸದಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...