alex Certify
ಕನ್ನಡ ದುನಿಯಾ       Mobile App
       

Kannada Duniya

ಆರೆಸ್ಸೆಸ್ ಮತ್ತು ಐಸಿಸ್ ಎರಡೂ ಒಂದೇ ಎಂದ ಕಾಂಗ್ರೆಸ್ ಮುಖಂಡ

ghulam-nabi-azad_650x400_41443277172

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಐಸಿಸ್ ಉಗ್ರ ಸಂಘಟನೆಗಳ ನಡುವೆ ಯಾವುದೇ ವ್ಯತ್ಯಾಸಗಳೂ ಇಲ್ಲ, ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿಕೆ ನೀಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ಜಮಾಯತ್ ಉಲಾಮಾ ಇ ಹಿಂದ್ ಸಂಘಟನೆ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತೆ ಕುರಿತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಗುಲಾಂ ನಬಿ ಆಜಾದ್, ಆರೆಸ್ಸೆಸ್ ಮತ್ತು ಐಸಿಸ್ ಉಗ್ರಗಾಮಿ ಸಂಘಟನೆ ನಡುವೆ ಸಾಮ್ಯತೆ ಇದೆ. ಸಮುದಾಯಗಳನ್ನು ಒಡೆಯುವುದು ಎರಡೂ ಸಂಘಟನೆಗಳ ಗುರಿಯಾಗಿದ್ದು, ಹಾಗಾಗಿ ನಾವು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಯಾವ ರೀತಿ ವಿರೋಧಿಸುತ್ತೇವೆಯೋ ಅದೇ ರೀತಿ ಐಸಿಸ್ ಉಗ್ರ ಸಂಘಟನೆಯನ್ನೂ ಸಹ ವಿರೋಧಿಸಬೇಕಿದೆ ಎಂದು ತಿಳಿಸಿದ್ದಾರೆ.

ಗುಲಾಂ ನಬಿ ಆಜಾದ್ ಅವರ ಈ ಹೇಳಿಕೆ ಈಗಾಗಲೇ ವಿವಾದಕ್ಕೆ ಕಾರಣವಾಗಿದ್ದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಈ ಹೇಳಿಕೆಗೆ ಕಾಂಗ್ರೆಸ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...