alex Certify
ಕನ್ನಡ ದುನಿಯಾ       Mobile App
       

Kannada Duniya

ನೋಟು ನಿಷೇಧ ವಿರೋಧಿಸಿ ನ.28 ರಂದು ‘ಆಕ್ರೋಶ ದಿನ’ ಆಚರಣೆ

mamta_1479897533

ನೋಟು ನಿಷೇಧ ಖಂಡಿಸಿ ವಿಪಕ್ಷಗಳು ನಡೆಸುತ್ತಿರುವ ಹೋರಾಟ ತೀವ್ರತೆ ಪಡೆಯುತ್ತಿದೆ. ನವೆಂಬರ್ 28ರಂದು ದೇಶದಾದ್ಯಂತ ವಿಪಕ್ಷಗಳಿಂದ ಆಕ್ರೋಶ ದಿನ ಆಚರಿಸಲು ನಿರ್ಧರಿಸಲಾಗಿದೆ. ಜಂತರ್ ಮಂತರ್ ನಲ್ಲಿ ಹೋರಾಟ ನಡೆಸುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತೆ ಪ್ರಧಾನ ಮಂತ್ರಿ ವಿರುದ್ಧ ಕೆಂಡಕಾರಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಿಟ್ಲರ್. ಅಧಿಕಾರದಲ್ಲಿರುವ ಅವರಿಗೆ ಕಣ್ಣು ಹಾಗೂ ಕಿವಿ ಬಂದ್ ಆಗಿದೆ ಎಂದು ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಅನೇಕ ವ್ಯಾಪಾರ-ವಹಿವಾಟು ಸ್ಥಗಿತಗೊಂಡಿದೆ. ಕೂಲಿಕಾರರಿಗೆ ಹಣ ಸಿಗ್ತಾ ಇಲ್ಲ. ಸರಿಯಾಗಿ ಊಟ ಸಿಗ್ತಾ ಇಲ್ಲ ಎಂದು ಮಮತಾ ಆರೋಪ ಮಾಡಿದ್ದಾರೆ.

ಬಿಜೆಪಿ ಸರ್ಕಾರ, ತಕ್ಷಣ ನೋಟು ನಿಷೇಧ ನಿರ್ಧಾರವನ್ನು ವಾಪಸ್ ಪಡೆಯಲಿ ಎನ್ನುವುದು ವಿರೋಧ ಪಕ್ಷಗಳ ಆಗ್ರಹವಾಗಿದೆ. ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಮಮತಾ ಹೋರಾಟಕ್ಕೆ ಅನೇಕ ನಾಯಕರು ಸಾಥ್ ನೀಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...