alex Certify
ಕನ್ನಡ ದುನಿಯಾ       Mobile App
       

Kannada Duniya

ಕೃಷ್ಣನ ಮೇಲಿದ್ದ ಆಭರಣಗಳು ರಾತ್ರೋರಾತ್ರಿ ಮಾಯ

ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲೇ ಮಹಾರಾಷ್ಟ್ರದ ಕೃಷ್ಣ ದೇವಸ್ಥಾನ ಒಂದರಲ್ಲಿನ ವಿಗ್ರಹದ ಮೇಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಕಳುವಾಗಿರುವ ಪ್ರಕರಣ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಥಾಣೆಯ ಪ್ರಮುಖ ಮಾರುಕಟ್ಟೆ ಪ್ರದೇಶ ಒಂದರ ದೇವಾಲಯದಲ್ಲಿ ಕಳ್ಳರು ಕರಾಮತ್ತು ತೋರಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಶನಿವಾರ ರಾತ್ರಿಯಲ್ಲಿ ಆಭರಣ ಕಳುವಾಗಿರುವ ಸಾಧ್ಯತೆ ಇದೆ ಅಂತ ಹೇಳಲಾಗ್ತಿದೆ. ಚಿನ್ನ ಮತ್ತು ಬೆಳ್ಳಿಯ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಕಳವು ಮಾಡಿದ್ದಾರೆ ಅಂತ ಹೇಳಲಾಗ್ತಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವಸ್ಥಾನದ ಸಿಸಿ ಟಿವಿ ಕ್ಯಾಮರಾಗಳ ಫುಟೇಜ್ ಪರಿಶೀಲನೆ ನಡೆಸುತ್ತಿದ್ದು ಕಳ್ಳತನದ ವೇಳೆ ಸಿಸಿ ಟಿವಿ ಕ್ಯಾಮರಾಗಳನ್ನು ಕೂಡ ಕಳ್ಳರು ಹಾನಿಗೊಳಪಡಿಸಿದ್ದಾರೆ. ದೇವಸ್ಥಾನದ ಬಗ್ಗೆ ಚೆನ್ನಾಗಿ ತಿಳಿದವರೇ ಈ ಕೃತ್ಯ ಮಾಡಿರುವ ಸಾಧ್ಯತೆ ಇದೆ ಅಂತ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...