alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಮ್ಲಾದಲ್ಲಿ ಭೀಕರ ಬಸ್ ದುರಂತ : 28 ಮಂದಿ ಸಾವು

bus

ಶಿಮ್ಲಾದ ರಾಂಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರಂತದಲ್ಲಿ 28 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಬೆಳಗ್ಗೆ 9.15ಕ್ಕೆ ಈ ಅವಘಡ ಸಂಭವಿಸಿದೆ.

ಬಸ್ ನಲ್ಲಿ ಸುಮಾರು 40 ಪ್ರಯಾಣಿಕರಿದ್ರು. ಬಸ್ ಶಿಮ್ಲಾದಿಂದ ಕಿನ್ನೌರ್ ಗೆ ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿ 5ರ ಬಳಿ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಅಪಘಾತದಲ್ಲಿ 7 ಜನರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬದುಕುಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...