alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಡಿನ ಬೆಂಕಿಯಲ್ಲಿ ಸಿಲುಕಿದ ವಿದ್ಯಾರ್ಥಿಗಳ ರಕ್ಷಣೆಗೆ ಹರಸಾಹಸ

ಚೆನ್ನೈ: ತಮಿಳುನಾಡಿನಲ್ಲಿ ಕಾಡಿನ ಬೆಂಕಿಯಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ರಕ್ಷಣೆಗೆ ಭಾರತೀಯ ವಾಯುಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಥೇಣಿ ಜಿಲ್ಲೆಯ ಕುರಂಗಿಣಿ ಬೆಟ್ಟದಲ್ಲಿ ಕಾಡಿಗೆ ಬೆಂಕಿ ತಗುಲಿದ್ದು, ಇಡೀ ಪ್ರದೇಶಕ್ಕೆ ವ್ಯಾಪಿಸಿದೆ. ಇಲ್ಲಿಗೆ ತೆರಳಿದ್ದ 20 ವಿದ್ಯಾರ್ಥಿಗಳು ಅಪಾಯಕ್ಕೆ ಸಿಲುಕಿದ್ದು, ಥೇಣಿ ಜಿಲ್ಲಾಧಿಕಾರಿ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದಿದ್ದಾರೆ. ಅಲ್ಲದೇ, ತಮಿಳುನಾಡು ಸಿ.ಎಂ. ಪನ್ನೀರ್ ಸೆಲ್ವಂ ಮನವಿ ಮೇರೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕ್ರಮಕೈಗೊಂಡಿದ್ದು, ವಾಯುಪಡೆ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಸೂಚಿಸಿದ್ದಾರೆ.

ಅದರಂತೆ ರಕ್ಷಣಾ ಕಾರ್ಯಾಚರಣೆ ನಡೆಸಿ 12 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಉಳಿದವರ ರಕ್ಷಣೆಗೆ ಭರದಿಂದ ಕಾರ್ಯಾಚರಣೆ ನಡೆಸಲಾಗಿದೆ. ಇಡೀ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿರುವುದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ನಡೆಸಿದ್ದಾರೆ. ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವಿದ್ಯಾರ್ಥಿಗಳೆಲ್ಲಾ ಕುರಂಗಿಣಿ ಬೆಟ್ಟದ ತಪ್ಪಲಿನಲ್ಲಿ ಟ್ರೆಕ್ಕಿಂಗ್ ಗೆ ತೆರಳಿದ್ದು, ಕಾಡಿನ ಬೆಂಕಿಯಿಂದ ವಾಪಸ್ ಬರಲು ಸಾಧ್ಯವಾಗಿರಲಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...