alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಪೇದೆಗೆ ರಜೆ ನೀಡದ ಎಸ್.ಪಿ.ಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು

ಚಳಿ, ಮಳೆ, ಗಾಳಿಯೆನ್ನದೆ ದಿನದ 24 ಗಂಟೆಗಳ ಕಾಲವೂ ಕರ್ತವ್ಯ ನಿರ್ವಹಿಸುವ ಪೊಲೀಸರು ನೀತಿ ನಿಯಮದ ನೆಪದಲ್ಲಿ ತಮ್ಮ ನೋವನ್ನು ತೋಡಿಕೊಳ್ಳಲು ಸಾಧ್ಯವಾಗುವುದೇ ಇಲ್ಲ.

ಆದರೆ ಅವರೂ ಎಲ್ಲರಂತೆ ಮನುಷ್ಯರು ಎಂಬುದನ್ನು ಅರಿತರೆ ಸಮಸ್ಯೆ ಇರುವುದಿಲ್ಲ. ಇದನ್ನು ಮರೆತು ಅನಾರೋಗ್ಯಕ್ಕೆ ಒಳಗಾಗಿದ್ದ ಮಹಿಳಾ ಪೊಲೀಸ್ ಪೇದೆಗೆ ರಜೆ ನೀಡದೆ ಅಮಾನವೀಯತೆ ಮೆರೆದಿದ್ದ ಪೊಲೀಸ್ ಅಧಿಕಾರಿಯೊಬ್ಬ ಅದಕ್ಕೆ ಬೆಲೆ ತೆತ್ತಿದ್ದಾನೆ.

ಇಂಥದೊಂದು ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಅನಾರೋಗ್ಯಕ್ಕೆ ಒಳಗಾಗಿದ್ದ ಮಹಿಳಾ ಪೇದೆ ರಜೆ ಕೋರಿ ಅರ್ಜಿ ಸಲ್ಲಿಸಿದ್ದು, ಅದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರ್ಲಕ್ಷಿಸಿದ್ದಾರೆ.

ಅನಾರೋಗ್ಯಕ್ಕೆ ಒಳಗಾಗಿದ್ದ ಮಹಿಳಾ ಪೇದೆ ಬಳಿಕ ಸಾವನ್ನಪ್ಪಿದ್ದು, ಇದರಿಂದ ಆಕ್ರೋಶಗೊಂಡ ಸಹೋದ್ಯೋಗಿಗಳು, ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಲಗ್ಗೆ ಇಟ್ಟಿದ್ದು, ಎಸ್.ಪಿ. ಹಾಗೂ ಡಿವೈಎಸ್ಪಿಯನ್ನು ಅಟ್ಟಾಡಿಸಿ ಬಡಿದಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...