alex Certify
ಕನ್ನಡ ದುನಿಯಾ       Mobile App
       

Kannada Duniya

ಅನೈತಿಕ ಸಂಬಂಧ ಹಿನ್ನಲೆ: ಮಾಜಿ ಕೇಂದ್ರ ಸಚಿವರ ಸಂಬಂಧಿಯ ಹತ್ಯೆ

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಸಂಬಂಧಿಯೊಬ್ಬರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಶವವನ್ನು ಹೊಸೂರು ಡ್ಯಾಂ ಬಳಿ ಎಸೆದಿದ್ದು, ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ.

ತಮಿಳುನಾಡಿನ ತಿರುಪೂರಿನಲ್ಲಿ ಗಾರ್ಮೆಂಟ್ ಉದ್ಯಮ ನಡೆಸುತ್ತಿದ್ದ 40 ವರ್ಷದ ಶಿವಮೂರ್ತಿ ಹತ್ಯೆಗೀಡಾದವರಾಗಿದ್ದು, ಇವರ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಮೂರ್ತಿ ಎಂಬಾತನ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದೇ ಹತ್ಯೆಗೆ ಕಾರಣವೆಂದು ಹೇಳಲಾಗಿದೆ.

ಶಿವಮೂರ್ತಿ ಹತ್ಯೆಗೆ ಮೂರ್ತಿ ಸುಪಾರಿ ನೀಡಿದ್ದು, ಜೂನ್ 25 ರಂದು ಶಿವಮೂರ್ತಿಯನ್ನು ಅವರದ್ದೇ ಕಾರಿನಲ್ಲಿ ಅಪಹರಿಸಿದ್ದ ಮೂವರು ದುಷ್ಕರ್ಮಿಗಳು ಹತ್ಯೆಗೈದಿದ್ದರು. ಬಳಿಕ ಶವವನ್ನು ಹೊಸೂರು ಡ್ಯಾಂ ಬಳಿ ಎಸೆದಿದ್ದು, ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇವರುಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...