alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗಿ ಭದ್ರತೆ ನಡುವೆ ಪಾಕ್ ಪರ ಘೋಷಣೆ ಕೂಗಿ ಆತಂಕ ಸೃಷ್ಟಿಸಿದ ಮಹಿಳೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಣರಾಜ್ಯೋತ್ಸವಕ್ಕೆ ಭರದ ಸಿದ್ಧತೆಗಳು ನಡೆಯುತ್ತಿರುವ ಮಧ್ಯೆ, ಹೈದರಾಬಾದ್ ಮೂಲದ ಮಹಿಳೆಯೊಬ್ಬಳು ಬಿಗಿ ಭದ್ರತೆಯ ನಡುವೆಯೂ ಇಂಡಿಯಾ ಗೇಟ್ ಒಳ ನುಗ್ಗಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗುವ ಮೂಲಕ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂಡಿಯಾ ಗೇಟ್ ಬಳಿ ಸಿದ್ಧತೆ ನಡೆಸಲಾಗುತ್ತಿದ್ದು, ಹೀಗಾಗಿ ಜನಸಾಮಾನ್ಯರಿಗೆ ಪ್ರವೇಶ ನಿಷೇಧಿಸಲಾಗಿತ್ತು. ಈ ವೇಳೆ ಮಹಿಳೆಯೊಬ್ಬಳು ‘ಅಮರ್ ಜವಾನ್’ ಜ್ಯೋತಿ ಆವರಣ ಪ್ರವೇಶಿಸಲು ಯತ್ನಿಸಿದ್ದು, ಆಕೆಯ ಪ್ರಯತ್ನವನ್ನು ಸೈನಿಕರು ವಿಫಲಗೊಳಿಸಿದ್ದರು.

ಬಳಿಕ ಭದ್ರತಾ ಸಿಬ್ಬಂದಿಯನ್ನು ದೂಡಿಕೊಂಡು ಇಂಡಿಯಾ ಗೇಟ್ ಬಳಿ ಬಂದ ಮಹಿಳೆ, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾಳೆ. ಕೂಡಲೇ ಆಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ ಈ ಮಹಿಳೆ ಮಾನಸಿಕ ಅಸ್ವಸ್ಥೆ ಎನ್ನಲಾಗಿದ್ದು, ಎರಡು ದಿನಗಳ ಹಿಂದೆ ತನ್ನ ಮನೆ ತೊರೆದಿದ್ದು, ಹೀಗಾಗಿ ಆಕೆಯ ಪಾಲಕರು ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ಮಗಳು ಕಾಣೆಯಾಗಿರುವ ದೂರು ದಾಖಲಿಸಿದ್ದರೆಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...