alex Certify
ಕನ್ನಡ ದುನಿಯಾ       Mobile App
       

Kannada Duniya

ಇಂತಹ ಹೇಳಿಕೆ ನೀಡಿದ್ದಾರೆ ಈ ಮಾಜಿ ಮುಖ್ಯಮಂತ್ರಿ

ಶ್ರೀನಗರ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ(POK) ಪಾಕಿಸ್ತಾನಕ್ಕೆ ಸೇರಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡರಾಗಿರುವ ಸಂಸದ ಫಾರೂಕ್ ಅಬ್ದುಲ್ಲಾ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಪಿ.ಒ.ಕೆ. ಪ್ರದೇಶ ಪಾಕಿಸ್ತಾನಕ್ಕೆ ಸೇರಿದ್ದಾಗಿದೆ. ಭಾರತ ಶಾಂತಿ ಬಯಸಿದಲ್ಲಿ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕಿದೆ ಎಂದು ಹೇಳಿದ್ದಾರೆ.

ಭಾರತ ಪಾಕ್ ನೊಂದಿಗೆ ಮಾತುಕತೆ ನಡೆಸಿ ವಿವಾದ ಬಗೆಹರಿಸಬೇಕೆಂದು ಪ್ರತ್ಯೇಕತಾವಾದಿ ನಾಯಕರು ಒತ್ತಾಯಿಸಿದ್ದಾರೆ.

ಇದಕ್ಕೆ ಪೂರಕವಾದ ಮಾತುಗಳನ್ನಾಡಿದ ಫಾರೂಕ್ ಅಬ್ದುಲ್ಲಾ, ಮಾತುಕತೆ ನಡೆಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಬೇಕಿದೆ. ಮೋದಿ ಸರ್ಕಾರ ಸಂವಾದಕರಾಗಿ ದಿನೇಶ್ವರ್ ಶರ್ಮಾ ಅವರನ್ನು ನೇಮಕ ಮಾಡಿದೆ. ಅವರು ಪಾಕ್ ನೊಂದಿಗೆ ಮಾತುಕತೆ ನಡೆಸಬಹುದೇ ವಿನಃ ಶಾಶ್ವತ ಪರಿಹಾರ ದೊರಕಿಸಿಕೊಡಲಾರರು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...