alex Certify
ಕನ್ನಡ ದುನಿಯಾ       Mobile App
       

Kannada Duniya

ಸತ್ಯ ಹೇಳಿದ ಪನ್ನೀರ್ ಸೆಲ್ವಂ: ತಮಿಳುನಾಡು ತಲ್ಲಣ

tn-op

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ರಾತ್ರೋ ರಾತ್ರಿ ಅಲ್ಲೋಲಕಲ್ಲೋಲ ಉಂಟಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಮುಂದಿನ ಮುಖ್ಯಮಂತ್ರಿ ಶಶಿಕಲಾ ನಟರಾಜನ್ ವಿರುದ್ಧ ಬಂಡಾಯ ಎದ್ದಿದ್ದಾರೆ.

ರಾತ್ರಿ ಚೆನ್ನೈನ ಮರೀನಾ ಬೀಚ್ ನಲ್ಲಿರುವ ಜಯಲಲಿತಾ ಸಮಾಧಿ ಬಳಿ ಅರ್ಧ ಗಂಟೆಗೂ ಅಧಿಕ ಕಾಲ ಧ್ಯಾನಸ್ಥ ಸ್ಥಿತಿಯಲ್ಲಿ ಕುಳಿತಿದ್ದ ಪನ್ನೀರ್ ಸೆಲ್ವಂ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ನಾನು ರಾಜೀನಾಮೆ ನೀಡುತ್ತಿರಲಿಲ್ಲ. ಆದರೆ, ಬಲವಂತವಾಗಿ ನನ್ನಿಂದ ರಾಜೀನಾಮೆ ಪಡೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸುವಂತೆ ಶಶಿಕಲಾ ನನ್ನ ಮೇಲೆ ಒತ್ತಡ ಹೇರಿದ್ದರು ಎಂದು ಬಹಿರಂಗಪಡಿಸಿದ್ದಾರೆ.

ಅಮ್ಮನ ಕನಸು ಈಡೇರಿಸಲು ನಾನು ಪ್ರಯತ್ನಿಸುತ್ತೇನೆ. ಆಸ್ಪತ್ರೆಯಲ್ಲಿದ್ದ ‘ಅಮ್ಮ’ ನನಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸೂಚನೆ ನೀಡಿದ್ದರು. ಪ್ರಧಾನಿಯವರು ಕೂಡ ತಮಿಳುನಾಡನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಂತೆ ತಿಳಿಸಿದ್ದರು. ಆದರೆ, ಶಶಿಕಲಾ ಮತ್ತು ಅವರ ಬೆಂಬಲಿಗರು ನನಗೆ ಸಹಕಾರ ನೀಡದೇ, ಬಲವಂತವಾಗಿ ರಾಜೀನಾಮೆ ಪಡೆದುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬಿಕ್ಕಿ ಬಿಕ್ಕಿ ಅಳುತ್ತಲೇ ಮಾತನಾಡಿದ ಪನ್ನೀರ್ ಸೆಲ್ವಂ, ನಾನು ರಾಜೀನಾಮೆ ವಾಪಸ್ ಪಡೆದು, ಜನರ ಸೇವೆ ಮಾಡಲು ಸಿದ್ಧನಿದ್ದೇನೆ. ಸತ್ಯ ತಿಳಿಸಲು ‘ಅಮ್ಮ’ ನನಗೆ ಸಂದೇಶ ನೀಡಿದ್ದಾರೆ. ಶಶಿಕಲಾ ನಟರಾಜನ್ ನನ್ನ ಮೇಲೆ ಒತ್ತಡ ತಂದಿದ್ದಾರೆ ಎಂದು ಕಿಡಿಕಾರಿದ್ದಾರೆ. ಪನ್ನೀರ್ ಸೆಲ್ವಂ ನೀಡಿರುವ ಈ ಹೇಳಿಕೆ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...