alex Certify
ಕನ್ನಡ ದುನಿಯಾ       Mobile App
       

Kannada Duniya

ಪೋಷಕರಿಗೆ ಮೊಬೈಲ್ ನಲ್ಲಿ ಲಭ್ಯವಾಗಲಿದೆ ಮಕ್ಕಳ ಶಾಲಾ ಚಟುವಟಿಕೆ

ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಸರ್ಕಾರ, ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಯನ್ನು ಮಾಡುತ್ತಿದೆ. ಸರ್ಕಾರಿ ಶಾಲೆಯೆಂದರೆ ಮೂಗು ಮುರಿಯುತ್ತಿದ್ದವರು ಬೆರಗಾಗುವಂತೆ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೂ ಅದ್ಯತೆ ನೀಡಲಾಗುತ್ತಿದೆ.

ಇದೀಗ ಮತ್ತೊಂದು ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಸಿಸಿ ಟಿವಿ ಅಳವಡಿಸಲಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳ ಶಾಲಾ ಚಟುವಟಿಕೆಯನ್ನು ಕುಳಿತಲ್ಲಿಯೇ ಲೈವ್ ಆಗಿ ವೀಕ್ಷಿಸಬಹುದಾಗಿದೆ.

ಶಾಲಾ ಕೊಠಡಿಗಳಲ್ಲಿನ ಸಿಸಿ ಟಿವಿ ದೃಶ್ಯಾವಳಿಗಳು ಮಕ್ಕಳ ಪೋಷಕರ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಲೈವ್ ಆಗಿ ರವಾನೆಯಾಗಲಿದ್ದು, ಪಾಠ, ಪ್ರವಚನ ನಡೆಯುತ್ತಿರುವ ಮಾಹಿತಿ ಪೋಷಕರಿಗೆ ತಲುಪಲಿದೆ. ಇದು ಮಕ್ಕಳ ಶಿಕ್ಷಣಕ್ಕೆ ನೆರವಾಗುವುದಲ್ಲದೆ ಮಕ್ಕಳ ಸುರಕ್ಷತೆಯ ಮಾಹಿತಿಯೂ ಪೋಷಕರಿಗಿರುತ್ತದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...